prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
ಅಂತಾರಾಷ್ಟ್ರೀಯ

ವಾಲ್ಮಿಕಿ ಅಭಿವೃದ್ದಿ ನಿಗಮದ ಹಗರಣ : ಕೊನೆಗೂ ಬಿ ನಾಗೇಂದ್ರ ರಾಜೀನಾಮೆ

*ವಾಲ್ಮೀಕಿ ಅಭಿವೃದ್ಧಿ ನಿಗಮದ 94.73 ಕೋಟಿ ಅಕ್ರಮ ವರ್ಗಾವಣೆ ಆರೋಪ* *ಸಿಎಂ ಭೇಟಿಯಾಗಿ ಸಚಿವ ಬಿ ನಾಗೇಂದ್ರ ರಾಜೀನಾಮೆ* *ಬಿಜೆಪಿ ಹೋರಾಟದ ಬೆನ್ನಲ್ಲೇ ಸಚಿವ ಸಂಪುಟದ ಮೊದಲ ವಿಕೆಟ್ ಪತನ* ಬೆಂಗಳೂರು ಪ್ರಜಾಕಿರಣ.ಕಾಮ್ : ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರದ ಮೊದಲ ವಿಕೆಟ್ ಕೊನೆಗೂ ನಿರೀಕ್ಷೆಯಂತೆ ಪತನಗೊಂಡಿದೆ. ಪರಿಶಿಷ್ಟ ಪಂಗಡಗಳ‌ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವರು ಮತ್ತು ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದ ಬಿ. ನಾಗೇಂದ್ರ ಇಂದು ಸಿಎಂ ಸಿದ್ದರಾಮಯ್ಯ […]

ಅಂತಾರಾಷ್ಟ್ರೀಯ

ಚಾರಣಕ್ಕೆಂದು ತೆರಳಿ ಮೃತಪಟ್ಟಿರುವವರ ಸಂಖ್ಯೆ 9 ಕ್ಕೆ

*ಚಾರಣಿಗರ ಸುರಕ್ಷಿತ ರಕ್ಷಣೆ ಮತ್ತು ಮೃತ ದೇಹಗಳನ್ನು ರಾಜ್ಯಕ್ಕೆ ತುರ್ತಾಗಿ ತರಲು ಅಗತ್ಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ* *ಡೆಹ್ರೋಡೋನ್ ನಲ್ಲಿರುವ ಕಂದಾಯ ಸಚಿವರು ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು ಪ್ರಜಾಕಿರಣ.ಕಾಮ್ ಜೂ5: ಉತ್ತರಾಖಂಡದ ಶಾಸ್ತ್ರತಾಳ್ ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿರುವವರ ಮೃತದೇಹಗಳನ್ನು ಕುಟುಂಬದವರಿಗೆ ತಲುಪಿಸುವ ಮತ್ತು ರಕ್ಷಿಸಲ್ಪಟ್ಟಿರುವ ಉಳಿದ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]

ಅಂತಾರಾಷ್ಟ್ರೀಯ

ಎಲ್ಲಾ ಸಮೀಕ್ಷೆಗಳೂ ಸುಳ್ಳಾಗಿವೆ ಎಂದ ಸಿದ್ದರಾಮಯ್ಯ

ಬೆಂಗಳೂರು ಪ್ರಜಾಕಿರಣ.ಕಾಮ್  4: ಚುನಾವಣಾ ಫಲಿತಾಂಶದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿಲ್ಲ. 15-20 ಸ್ಥಾನ ನಮ್ಮ ನಿರೀಕ್ಷೆಯಾಗಿತ್ತು. ಆದರೆ, 2019 ರಲ್ಲಿ ಕೇವಲ ಒಂದು ಸ್ಥಾನದಲ್ಲಿ ಗೆದ್ದಿದ್ದೆವು. ಈಗ 9 ಕ್ಕೆ ಏರಿದ್ದೇವೆ. ಈ ಬಾರಿ ನಮಗೆ ಶೇ 45.34, ಬಿಜೆಪಿ ಶೇ 46.04 ರಷ್ಟು ಮತ ಪಡಿದಿದೆ. 2019 ರಲ್ಲಿ ಬಿಜೆಪಿ ಶೇ 51.38 ರಷ್ಟು ಮತ ಗಳಿಸಿತ್ತು. ನಮಗೆ ಶೇ31.88 ರಷ್ಟು […]

ಅಂತಾರಾಷ್ಟ್ರೀಯ

ಧಾರವಾಡ ಲೋಕಸಭಾ ಕ್ಷೇತ್ರದಿಂದ ಐದನೇ ಬಾರಿಗೆ ಸಂಸತ್ ಪ್ರವೇಶಿಸಿದ ಪ್ರಹ್ಲಾದ್ ಜೋಶಿ

ಧಾರವಾಡ ಪ್ರಜಾಕಿರಣ.ಕಾಮ್ : ತೀವ್ರ ಕುತೂಹಲ ಕೆರಳಿಸಿದ್ದ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಚಿವ ಪ್ರಹ್ಲಾದ ಜೋಶಿ ಸತತ ಐದನೇ ಬಾರಿಗೆ ಜಯ ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಪ್ರಥಮ ಬಾರಿಗೆ ಲೋಕಸಭಾ ಚುನಾವಣೆಗೆ ಇಳಿದಿದ್ದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ತೀವ್ರ ಪೈಪೋಟಿ ನೀಡಿದರೂ ನಿರೀಕ್ಷೆಯಂತೆ  ಪರಾಭವಗೊಂಡಿದ್ದಾರೆ. ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡ ಜೋಶಿ, ಕೊನೆಗೂ ದಡ ಸೇರಿ ನಿಟ್ಟುಸಿರು ಬಿಟ್ಟಿದ್ದಾರೆ‌. ಮಧ್ಯಾಹ್ನ ವರೆಗೂ ಎಣಿಕೆ ಕಾರ್ಯ ಮುಂದುವರೆದಿದ್ದು, ಜೋಶಿ ಅವರು 97 ಸಾವಿರಕ್ಕೂ ಅಧಿಕ‌ಮತಗಳ ಮುನ್ನಡೆಯಲ್ಲಿ […]

ಅಂತಾರಾಷ್ಟ್ರೀಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆಗೆ ಸಿಎಂ ನೇರ ಹೊಣೆ

ಬೆಂಗಳೂರು ಪ್ರಜಾಕಿರಣ.ಕಾಮ್ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣದ ವರ್ಗಾವಣೆಗೆ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಹೊಣೆ ಹೊರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಎಲ್ಲವನ್ನೂ ಸಚಿವ ನಾಗೇಂದ್ರ ಅವರ ತಲೆಗೆ ಕಟ್ಟುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಅಕ್ರಮದಲ್ಲಿ ಸರ್ಕಾರದ ಇಡೀ ಸಂಪುಟವೇ ಭಾಗಿಯಾಗಿರುವ ಅನುಮಾನವಿದೆ. ಹೀಗಾಗಿ ಎಲ್ಲಾ ನಿಗಮ ಮಂಡಳಿಗಳಲ್ಲಿ ಇರುವ ಹಣದ ಬಗ್ಗೆ ಜನರ ಮುಂದೆ ಲೆಕ್ಕ […]

ರಾಜ್ಯ

ವಿಧಾನ ಪರಿಷತ್ತಿನ 11 ಸ್ಥಾನಕ್ಕೆ 12 ಅಭ್ಯರ್ಥಿಗಳಿಂದ 27 ನಾಮಪತ್ರ

ಬೆಂಗಳೂರು ಪ್ರಜಾಕಿರಣ.ಕಾಮ್  ಜೂನ್ 03 : ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ನಡೆಯಲಿರುವ ದೈವಾರ್ಷಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು (03-06-2024) 11 ಅಭ್ಯರ್ಥಿಗಳಿಂದ 26 ನಾಮಪತ್ರಗಳು ಸಲ್ಲಿಕೆಯಾಗಿದ್ದು, ನಾಮಪತ್ರ ಸಲ್ಲಿಕೆಯ ಆರಂಭದ ದಿನದಿಂದ ಒಟ್ಟು 12 ಅಭ್ಯರ್ಥಿಗಳಿಂದ ಒಟ್ಟು 27 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಕೆಯ ಕೊನೆಯ ದಿನ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಡಾ. ಯತೀಂದ್ರ.ಎಸ್ ಎರಡು ನಾಮಪತ್ರ, ಕೆ. ಗೋವಿಂದರಾಜು ಎರಡು ನಾಮಪತ್ರ, ಬಿಲ್ಕಿಸ್ ಬಾನೋ ಎರಡು ನಾಮಪತ್ರ, […]

ರಾಜ್ಯ

ಸಚಿವ ನಾಗೇಂದ್ರ ರಾಜಿನಾಮೆ ಕೇಳಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಪ್ರಜಾಕಿರಣ.ಕಾಮ್ ಜೂನ್ 03: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರ ರಾಜಿನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವರು ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ನಮಗೆ ಯಾರೂ ಯಾವ ಬೆದರಿಕೆಯೂ ಹಾಕಿಲ್ಲ ಎಂದರು. ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಬಿಜೆಪಿ ಅವರು ಸಚಿವ ನಾಗೇಂದ್ರ ಅವರ […]

ರಾಜ್ಯ

ಧಾರವಾಡದ ಶಾಲಾ ವಾಹನದಲ್ಲಿ ಕಾಣಿಸಿಕೊಂಡ ಬೆಂಕಿ : ತಪ್ಪಿದ ಅನಾಹುತ

ಮಕ್ಕಳಿದ್ದ ಶಾಲಾ ವಾಹನದಲ್ಲಿ ಕಾಣಿಸಿಕೊಂಡ ಬೆಂಕಿ – ತಪ್ಪಿದ ಅನಾಹುತ ಧಾರವಾಡ ಪ್ರಜಾಕಿರಣ .ಕಾಮ್ : ಮಕ್ಕಳಿದ್ದ ಶಾಲಾ ವಾಹನದಲ್ಲಿ ಆಕಸ್ಮಿಕವಾಗಿ ಏಕಾಎಕಿ ಬೆಂಕಿ ಕಾಣಿಸಿಕೊಂಡ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ಸೋಮವಾರ ನಡೆದಿದೆ. ಧಾರವಾಡದ ಕೋರ್ಟ್ ಸರ್ಕಲ್ ಬಳಿ ಖಾಸಗಿ ಶಾಲಾ ವಾಹನವೊಂದು ಮಕ್ಕಳನ್ನು ಕರೆದುಕೊಂಡು ಶಾಲೆಗೆ ಹೊರಟಿದ್ದ ಸಂದರ್ಭದಲ್ಲಿ ವಾಹನದ ಎಂಜಿನ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಶಾಲಾ ಮಕ್ಕಳನ್ನು ಕೆಳಗಿಳಿಸಿ ಅಗ್ನಿಶಾಮಕ ದಳದವರಿಗೆ ಮಾಹಿತಿ ಮುಟ್ಟಿಸಲಾಗಿದೆ. ಇದರಿಂದಾಗಿ ಕೆಲಕಾಲ ಮಕ್ಕಳು ಹಾಗೂ ವಾಹನ ಚಾಲಕ […]

ರಾಜ್ಯ

ಧಾರವಾಡದ ವಿನಯ ಕುಲಕರ್ಣಿ ಮನೆ ಮುಂದೆ ಪ್ರತಿಭಟನೆಗೆ ಪೊಲೀಸರ ನಕಾರ

*ಕೊನೆ ಕ್ಷಣದಲ್ಲಿ ಪರಿಷತ್ ಟಿಕೆಟ್ ಕೈ ತಪ್ಪಲು ಪ್ರಸಾದ ಅಬ್ಬಯ್ಯ, ಎನ್.ಹೆಚ್. ಕೋನರೆಡ್ಡಿ, ವಿನಯ ಕುಲಕರ್ಣಿ ಕಾರಣ* *ಇಸ್ಮಾಯಿಲ್ ತಮಟಗಾರ ಬೆಂಬಲಿಗರ ಆಕ್ರೋಶ* *ತಮಟಗಾರ ಬೆಂಬಲಿಗರಿಗೆ ಪೊಲೀಸರಿಂದ ಖಡಕ್ ಎಚ್ಚರಿಕೆ ಹಿನ್ನೆಲೆ ಮುತ್ತಿಗೆ, ಪ್ರತಿಭಟನೆ ವಾಪಾಸ್* ಧಾರವಾಡ ಪ್ರಜಾಕಿರಣ.ಕಾಮ್ : ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರ ಆಕ್ರೋಶ ಭುಗಿಲೆದ್ದಿದೆ. ನಿನ್ನೆ ರಾತ್ರಿಯಿಂದ ಪ್ರತಿಭಟನೆ, ಕಿಡಿಕಾರುತ್ತಿದ್ದು, ಸಾವಿರಾರು ಜನ ಅಂಜುಮನ್ ಆವರಣದಲ್ಲಿ ಜಮಾಯಿಸಿದ್ದರು. ಇಂದು ಧಾರವಾಡ […]

ರಾಜ್ಯ

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ: ಸಿಎಂ

ಬೆಂಗಳೂರು ಪ್ರಜಾಕಿರಣ.ಕಾಮ್  ಜೂ1: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು. ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ SIT ರಚಿಸಲಾಗಿದ್ದು ತನಿಖೆ ಚುರುಕಾಗಿ ನಡೆಯುತ್ತಿದೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು. *ನಾವು ಕಾನೂನು ಪಾಲಕರು* ಬಿಜೆಪಿ ಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿದ್ದ […]