prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
ರಾಜ್ಯ

ಬಿಜೆಪಿ ಸರ್ಕಾರದ ವಿರುದ್ಧ ವಿಡಿಯೋ ಅಭಿಯಾನ ಶುರು ಮಾಡಿದ ಕಾಂಗ್ರೆಸ್

ಬೆಂಗಳೂರು prajakiran.com : ರಾಜ್ಯದಲ್ಲಿ ಕೊರೊನಾ ನಿಯಂತ್ರಣದ ಹೆಸರಿನಲ್ಲಿ‌ ನಡೆದಿರುವ ಭ್ರಷ್ಟಾಚಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್  #LekkaKodi ಎಂಬ ಹ್ಯಾಷ್ ಟ್ಯಾಗ್‌ನೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ವಿಡಿಯೋ ಅಭಿಯಾನ ಶುರು ಮಾಡಿದೆ. ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು, ಸಂಸದರು, ಕಾರ್ಯಕರ್ತರು ವಿಡಿಯೊ ಮಾಡಿ, ಶೇರ್ ಮಾಡುವ ಮೂಲಕ ಇದರಲ್ಲಿ ಭಾಗವಹಿಸಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ‌ ವಿನಂತಿ ಮಾಡಿದ್ದಾರೆ. #LekkaKodi ರಾಜ್ಯ ಸರಕಾರ ಕೋವಿಡ್ ಸೋಂಕಿತರ ಆರೈಕೆಗೆ ಈವರೆಗೆ ಎಷ್ಟು ಖರ್ಚು ಮಾಡಿದೆ ಕೇಂದ್ರ ಸರಕಾರ  […]

ರಾಜ್ಯ

ಜುಲೈ 14 ರಿಂದ 7 ದಿನ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್

ಬೆಂಗಳೂರು prajakiran.com : ರಾಜ್ಯದ ರಾಜಧಾನಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಇತ್ತೀಚಿಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸೋಂಕು ನಿಯಂತ್ರಣದ ದೃಷ್ಟಿಯಿಂದ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಬರುವ ಮಂಗಳವಾರ, ಜುಲೈ 14ರ ರಾತ್ರಿ 8:00 ರಿಂದ 7 ದಿನಗಳ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಈ ಅವಧಿಯಲ್ಲಿ ಅಗತ್ಯ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿದ್ದು, ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ […]

ರಾಜ್ಯ

ಯಾದಗಿರಿಯಲ್ಲಿ ಸರ್ಕಾರಿ ಕಚೇರಿಗಳಿಗೆ  ಧಿಡೀರ್‌ ಭೇಟಿ ನೀಡಿದ ಜಿಲ್ಲಾಧಿಕಾರಿ

ಯಾದಗಿರಿ prajakiran.com :  ನಗರದ ಜಿಲ್ಲಾ ಖಜಾನೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಒ) ಕಚೇರಿಗಳಿಗೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರು ಶನಿವಾರ ಧಿಡೀರ್‌ ಭೇಟಿ ನೀಡಿ ಪರಿಶೀಲಿಸಿದರು. ಪ್ರಾದೇಶಿಕ ಸಾರಿಗೆ ಕಚೇರಿಗೆ ಭೇಟಿ ನೀಡಿದ ಅವರು, ಹಾಜರಾತಿ ಪರಿಶೀಲಿಸಿದರು. ನಂತರ ಎಲ್‌ಎಲ್‌ಆರ್ ಮೋಟಾರು ಚಾಲನಾ ಪರವಾನಗಿ ಹಾಗೂ ಮೋಟಾರು ನೋಂದಣಿಗಾಗಿ ಸಲ್ಲಿಸಿದ ಅರ್ಜಿಗಳ ಸ್ವೀಕೃತಿ, ಅವುಗಳ ವಿಲೇವಾರಿ ಹಾಗೂ ಬಾಕಿಯಿರುವ ಅರ್ಜಿಗಳ ಪರಿಶೀಲನೆ ಮಾಡಿ, ಬಾಕಿಯಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿಗೆ ಕ್ರಮ ವಹಿಸಲು ಸಂಬಂಧಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದರು. […]

ಅಪರಾಧ

ರಾಯಚೂರು ಜಿಲ್ಲೆಯಲ್ಲಿ ಹಾಡ ಹಗಲೇ ನಾಲ್ವರ ಬರ್ಬರ ಕೊಲೆ

ರಾಯಚೂರು prajakiran.com  : ಹಳೆ ವೈಷಮ್ಯ ಹಾಗೂ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ನಾಲ್ವರನ್ನು ಹಾಡ ಹಗಲೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಸಿಂಧನೂರು ನಗರದ ಸುಕಾಲಪೇಟೆಯ ಮನೆಯ ಮುಂದೆ ಇಬ್ಬರು ಪುರುಷರು, ಇಬ್ಬರ ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಯಾದವರನ್ನು ಸಾವಿತ್ರಮ್ಮ (55), ಶ್ರೀದೇವಿ(38), ಹನುಮೇಶ್ (35) ನಾಗರಾಜ್ (33) ಎಂದು ಗುರುತಿಸಲಾಗಿದೆ. ಅಲ್ಲದೆ, ಈ ಘಟನೆಯಲ್ಲಿ‌ ಇನ್ನೂ ಮೂವರಿಗೆ  ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಸಮೀಪದ  ಆಸ್ಪತ್ರೆಗೆ ದಾಖಲಿಸಿ […]

ರಾಜ್ಯ

ಕೋವಿಡ್ ವರದಿ ಇನ್ನಷ್ಟು ತ್ವರಿತಗೊಳಿಸಬೇಕು ಎಂದ ಧಾರವಾಡ ಜಿಲ್ಲಾಧಿಕಾರಿ

ಧಾರವಾಡ prajakiran.com : ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಕೋವಿಡ್ ತಪಾಸಣೆ ಪ್ರಯೋಗಾಲಯ ವರದಿ ನೀಡುವ ಕಾರ್ಯವನ್ನು ಇನ್ನಷ್ಟು ತ್ವರಿತಗೊಳಿಸಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ನಡೆದ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಅಗತ್ಯ ಬಿದ್ದರೆ ತಾಲೂಕು ಕೇಂದ್ರಗಳಲ್ಲಿಯೂ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿ,  ಲಕ್ಷಣ ರಹಿತ  ರೋಗಿಗಳಿಗೆ  ಅಲ್ಲಿಯೇ ಚಿಕಿತ್ಸೆ ನೀಡಲಾಗುವುದು ಎಂದರು. ಆಯಾ ತಹಸೀಲ್ದಾರರಯ ಸ್ಥಳೀಯವಾಗಿ ಆಸ್ಪತ್ರೆ, ವಸತಿ ಶಾಲೆಗಳಲ್ಲಿ, ಹಾಸಿಗೆಗಳು, ಆಹಾರ […]

ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶ ಗೌಡ ಕೊಲೆ ಪ್ರಕರಣ : ನಿವೃತ್ತ ಪೊಲೀಸ್ ಆಯುಕ್ತ ಸೇರಿ 6 ಪೊಲೀಸರ ವಿಚಾರಣೆ

ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶ ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ನಿವೃತ್ತ ಪೊಲೀಸ್ ಆಯುಕ್ತ ಸೇರಿ 6 ಪೊಲೀಸರ ವಿಚಾರಣೆ ನಡೆದಿದೆ ಅಂದಿನ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಪಾಂಡುರಂಗ ರಾಣೆ, ಡಿಸಿಪಿಗಳಾದ ಮಲ್ಲಿಕಾರ್ಜುನ ಬಾಲದಂಡಿ, ಜಿನೇಂದ್ರ ಖಣಗಾವಿ, ಧಾರವಾಡ ಎಸಿಪಿ ವಾಸುದೇವ ನಾಯ್ಕ, ಅಂದಿನ ಉಪನಗರ ಪೊಲೀಸ್ ಇನ್ಸಪೆಕ್ಟರ್ ಗಳಾದ ಚನ್ನಕೇಶವ ಟಿಂಗರಿಕರ್ ಹಾಗೂ ಮೋತಿಲಾಲ್ ಪವಾರ್ ಸೇರಿ ಹಲವು ಪೊಲೀಸರ ವಿಚಾರಣೆಯನ್ನು ಸಿಬಿಐ ಅಧಿಕಾರಿಗಳ ತಂಡ ನಡೆಸಿದೆ […]

ರಾಜ್ಯ

ಪ್ರಾಥಮಿಕ ಶಾಲಾ ಶಿಕ್ಷಕರ ತರಬೇತಿ ಮುಂದೂಡಲು ಆಗ್ರಹ

ಧಾರವಾಡ Prajakiran.com : ರಾಜ್ಯದ  ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಜು.15 ರಿಂದ ತರಬೇತಿ ನೀಡಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿರುವುದು ಸರಿಯಾದ ಬೆಳವಣಿಗೆಯಲ್ಲ. ಒಂದೊಂದು ತರಬೇತಿ ಕೇಂದ್ರದಲ್ಲಿ 20 ಶಿಕ್ಷಕರು ಇರುತ್ತಾರೆ. ಜೊತೆಗೆ  ಶಿಕ್ಷಕರೇ ಸಾನಿಟೈಸರ್ ಮತ್ತು ಊಟವನ್ನು ತರಬೇಕು ಎಂದು ಅಧಿಕಾರಿಗಳು  ಸೂಚಿಸಿರುವುದು ಶಿಕ್ಷಕರ ಆಕ್ರೋಶಕ್ಕೆ ಕಾರಣವಾಗಿದೆ. 5 ದಿನ ನಲಿಕಲಿ, 5 ದಿನ ಜೀವನ ಕೌಶಲ್ಯ, 5 ದಿನ ವಿಷಯ ಆಧಾರಿತ ತರಬೇತಿ ನೀಡಲಿದ್ದು,ಒಬ್ಬ ಶಿಕ್ಷಕರಿಗೆ 10 ದಿನ ತರಬೇತಿ ನೀಡಿದರೆ ಪ್ರತಿದಿನ ಕೊಠಡಿಯನ್ನು […]

ಜಿಲ್ಲೆ

ಧಾರವಾಡ ತಾಲೂಕಿನ ಹಲವು ಹಳ್ಳಿ ಸಂಪರ್ಕಿಸುವ ರಸ್ತೆಯಲ್ಲಿ ದೊಡ್ಡ ತಗ್ಗು ಗುಂಡಿ

ಮಂಜುನಾಥ ಕವಳಿ ಧಾರವಾಡ prajakiran.com : ಧಾರವಾಡ ತಾಲೂಕಿನ ಕವಲಗೇರಿ, ಚಂದನಮಟ್ಟಿ, ಕನಕೂರು, ತಲವಾಯಿ ಗ್ರಾಮಗಳನ್ನು ಸಂರ್ಪಕಿಸುವ ರಸ್ತೆಗಳಲ್ಲಿ ದೊಡ್ಡ ದೊಡ್ಡ ತಗ್ಗು ಗುಂಡಿಗಳು ಬಿದ್ದಿವೆ. ಇದರಿಂದಾಗಿ ದಿನನಿತ್ಯ ನೂರಾರು ಪ್ರಯಾಣಿಕರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಸಾಗುವಂತಾಗಿದೆ. ಈ ರಸ್ತೆಯಲ್ಲಿ ಸಂಚರಿಸಿದರೆ ಎಲ್ಲಿ ಅವು ತಮ್ಮ ಬಲಿ ತೆಗೆದುಕೊಳ್ಳುತ್ತವಯೋ ಎಂಬ ಭಯ ಆವರಿಸಿದೆ.   ಧಾರವಾಡದಿಂದ ಕವಲಗೇರಿ, ಚಂದನಮಟ್ಟಿ, ಕನಕೂರು, ತಲವಾಯಿ ಸೇರಿದಂತೆ ವಿವಿಧ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದ್ದು, ಈ ರಸ್ತೆ ಹದಗೆಟ್ಟಿದ್ದರಿಂದ […]

ಜಿಲ್ಲೆ

ಧಾರವಾಡ ದಲಾಲ್ ವ್ಯಾಪಾರಸ್ಥರ ಸಂಘದಿಂದಲೂ ಸ್ವಯಂ ನಿರ್ಬಂಧ

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಹಳ್ಳಿ ಹಳ್ಳಿಗೂ ಮಹಾಮಾರಿ ಕರೋನಾ ವ್ಯಾಪಸುತ್ತಿರುವುದರಿಂದ ಧಾರವಾಡ ದಲಾಲ್ ವ್ಯಾಪಾರಸ್ಥರ ಸಂಘವು ಸ್ವಯಂ ಪ್ರೇರಿತವಾಗಿನಿರ್ಬಂಧ ಹೇರಲು ನಿರ್ಧರಿಸಿದೆ ಎಂದು ಸಂಘದಅಧ್ಯಕ್ಷ ಶಿವಶಂಕರ ಹಂಪಣ್ಣವರ ತಿಳಿಸಿದ್ದಾರೆ. ಜು. 13 ರಿಂದ ಜು. 31ರವರೆಗೆ ಪ್ರತಿದಿನ ಬೆಳಗ್ಗೆ 9ರಿಂದ ಸಂಜೆ 5 ಗಂಟೆಗೆ ಖರೀದಿ ಹಾಗೂ ಮಾರಾಟದ ವ್ಯಾಪಾರ ವಹಿವಾಟು ನಡೆಸಲಾಗುವುದು. ಹೀಗಾಗಿ ಧಾರವಾಡ ಜಿಲ್ಲೆಯ ಹಾಗೂ ಸುತ್ತಮುತ್ತಲಿನ ರೈತರು ಮಧ್ಯಾಹ್ನ 3 ಗಂಟೆಗೆ ಒಳಗೆ ಧಾರವಾಡ ಎಪಿಎಂಸಿಗೆ ಆವರಣಕ್ಕೆ ಆಗಮಿಸಬೇಕು ಎಂದು […]

ರಾಜ್ಯ

ಧಾರವಾಡದ ಕೆಲಗೇರಿ ಸ್ವಯಂ ಪ್ರೇರಿತ ಲಾಕಡೌನ್ …!

ಧಾರವಾಡ prajakiran.com : ಧಾರವಾಡದಲ್ಲಿ ದಿನದಿಂದ ದಿನಕ್ಕೆ ಕರೊನಾ ಅಟ್ಟಹಾಸ ಮುಂದುವರೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಧಾರವಾಡಕ್ಕೆ ಹೊಂದಿಕೊಂಡಿರುವ ಕೆಲಗೇರಿ ಗ್ರಾಮವನ್ನು ಗ್ರಾಮಸ್ಥರೇ ಸ್ವಯಂ ಪ್ರೇರಿತವಾಗಿ ಲಾಕಡೌನ್ ಮಾಡಲು ನಿರ್ಧಾರ ಕೈಗೊಂಡಿದ್ದಾರೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ಹಿರಿಯರೆಲ್ಲ ಸೇರಿಕೊಂಡು ಇಂತಹದೊಂದು ನಿರ್ಧಾರ ಕೈಗೊಂಡಿದ್ದು, ಗ್ರಾಮದ ಹಿರಿಯರು ಹಾಗೂ ಯುವಕರು ತಾವೇ ಸುತ್ತಾಡಿ ಎಲ್ಲವನ್ನೂ ಬಂದ್ ಮಾಡಿಸಿದ್ದಾರೆ. ಅಲ್ಲದೆ, ಈ ಕುರಿತು ಸ್ಥಳೀಯ ನಿವಾಸಿಗಳಿಗೆ ಮಾಹಿತಿ ನೀಡಿ, ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಒಂದು ವಾರದ ಮಟ್ಟಿಗೆ ಗ್ರಾಮವನ್ನು […]