ಅಂತಾರಾಷ್ಟ್ರೀಯ

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಕನ್ನಡಿಗರ ಮೇಲೆ ಎಮ್ ಇ ಎಸ್, ಶಿವಸೇನೆ ಪುಂಡಾಟ…..!

ಚಿಕ್ಕೋಡಿ prajakiran.com : ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಕನ್ನಡಿಗರ ಮೇಲೆ ಎಮ್ ಇ ಎಸ್ ಪುಂಡಾಟ ನಡೆಸಿದೆ. ಕನ್ನಡಿಗರ ವಾಹನಗಳ ಮೇಲೆ ಕಲ್ಲು ತೂರಾಟ ಮಾಡಿದ ದುಷ್ಕರ್ಮಿಗಳು, ಕನ್ನಡ ಬೋರ್ಡಗಳಿಗೆ ಮಸಿ ಬಳೆದು ಪುಂಡಾಟ ಮೆರದರು. ಶಿವಾಜಿ ಪ್ರತಿಮೆಗೆ ಅಪಮಾನ ಹಿನ್ನೆಲೆಯಲ್ಲಿ ಹಿಂಸಾಚಾರಕ್ಕೆ ಇಳಿದ ಎಮ್ ಇ ಎಸ್. ಮತ್ತು ಶಿವಸೇನೆ ಕಾರ್ಯಕರ್ತರು. ಕರ್ನಾಟಕದ ಗಡಿಭಾಗಕ್ಕೆ ಹೊಂದಿಕೊಂಡಿರುವ ಸಾಂಗ್ಲಿಯಲ್ಲಿ 50% ಗೂ ಅಧಿಕ ಕನ್ನಡಿಗರು ಇದ್ದಾರೆ. ಅಲ್ಲದೆ, ಕನ್ನಡ ಬೊರ್ಡ ಇರುವ ಅಂಗಡಿಗಳನ್ನು ಬಂದ್ ಮಾಡಿಸಿದರು. ಕರ್ನಾಟಕದ ಪ್ರತಿಷ್ಠಿತ […]

ಅಂತಾರಾಷ್ಟ್ರೀಯ

ಬೆಳಗಾವಿಯಲ್ಲಿನ ಪುಂಡಾಟಿಕೆ ಖಂಡಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಹುಬ್ಬಳ್ಳಿ prajakiran.com ಡಿ. 18: ಬೆಳಗಾವಿಯಲ್ಲಿ ನಿನ್ನೆ ರಾತ್ರಿ ನಡೆದ ಪುಂಡಾಟಿಕೆಯನ್ನು ಖಂಡಿಸುತ್ತೇನೆ. ಆ ಪುಂಡರನ್ನು ಸೆದೆ ಬಡಿಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಗೃಹ ಸಚಿವರಿಗೆ ಸೂಚಿಸಿದ್ದೇನೆ. ಅವರೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ. ಕಲ್ಲು ತೂರಾಟ ಮಾಡುವುದು , ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾಗೂ ಸರ್ಕಾರಿ ವಾಹನಗಳಿಗೆ ಹಾನಿ ಉಂಟುಮಾಡುವುದು […]

ಅಂತಾರಾಷ್ಟ್ರೀಯ

ಕನ್ನಡಿಗರ ರಕ್ಷಣೆ ನಮ್ಮ ಸರ್ಕಾರದ ಹೊಣೆ: ಬಸವರಾಜ ಬೊಮ್ಮಾಯಿ

ಬೆಳಗಾವಿ prajakiran.com ಡಿ.18: ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರ ರಕ್ಷಣೆ ನಮ್ಮ ಸರ್ಕಾರದ ಹೊನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ನಡೆದ ಪ್ರಕರಣದ ಬಗ್ಗೆ ಮಾತನಾಡಿದರು. ಕೆಲವರು ಕಾನೂನು ಬಾಹಿರವಾಗಿ ಪುಂಡಾಟಿಕೆ ಮಾಡಿದ್ದಾರೆ. ಕರ್ನಾಟಕದ ಕಾನೂನು ಸುವ್ಯವಸ್ಥೆ ನಮ್ಮ ಜವಾಬ್ದಾರಿ. ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ತೆ ಕಾಪಾಡಿಕೊಳ್ಳುವುದು ಅಲ್ಲಿನ ಸರ್ಕಾರದ ಜವಾಬ್ದಾರಿ. ಅಲ್ಲಿನ ಕನ್ನಡಿಗರ ರಕ್ಷಣೆ ಹಾಗೂ ಬಸ್ಸು ಇತ್ಯಾದಿ ವಾಹನಗಳ ರಕ್ಷಣೆ ಮಾಡಲು ನಮ್ಮ […]

ಅಂತಾರಾಷ್ಟ್ರೀಯ

ಸೇನಾ ಮುಖ್ಯಸ್ಥರ ದುರ್ಮರಣ ವಿಕೃತಿ ಮೆರೆದವರ ವಿರುದ್ಧ ಕಾನೂನು ಕ್ರಮ

ಸೇನಾ ಮುಖ್ಯಸ್ಥರ ದುರ್ಮರಣ: ಟ್ವೀಟ್ ಮಾಡಿದವರ ವಿರುದ್ಧ ಕಾನೂನು ಕ್ರಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ ಹಾವೇರಿ prajakiran.com, ಡಿ. 10 : ಬಿಪಿನ್ ರಾವತ್ ಅವರ ನಿಧನಕ್ಕೆ ಸಂಬಂಧಿಸಿದಂತೆ ಕೆಲವು ವಿಕೃತ ಮನಸ್ಸುಗಳು ಬೇಕಾಬಿಟ್ಟಿ , ಸಂಭ್ರಮಾಚರಣೆಯ ಟ್ವೀಟ್‍ಗಳನ್ನು ಮಾಡಿದ್ದು, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಪೊಲೀಸ್ ಮುಖ್ಯಸ್ಥರಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಇಂದು ನಡೆದ ಚುನಾವಣೆಯಲ್ಲಿ ಅವರು ಶಿಗ್ಗಾಂವ್ ತಾಲ್ಲೂಕು […]

ಅಂತಾರಾಷ್ಟ್ರೀಯ

ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಪತ್ನಿ ಮಧುಲಿಕಾ ಸೇರಿ 11 ಸಿಬ್ಬಂದಿ ಸಾವು

ನವದೆಹಲಿ prajakiran.com : ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ತಮಿಳುನಾಡಿನ ಕೂನೂರು ಬಳಿ ನಡೆದ ಹೆಲಿಕಾಪ್ಟರ್ ಪತನದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ವೆಲಿಂಗ್ಟನ್ ಸೇನಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಜನರು ಪ್ರಯಾಣಿಸುತ್ತಿದ್ದ MI-17V5 ಹೆಲಿಕಾಪ್ಟರ್ ತಮಿಳುನಾಡಿನ ಕುನ್ನೂರು ಬಳಿ ದಟ್ಟ ಅರಣ್ಯದಲ್ಲಿ ಬುಧವಾರ ಪತನಗೊಂಡಿತ್ತು. ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 13 ಜನರು ಮೃತಪಟ್ಟಿದ್ದಾರೆ ಎಂದು ಭಾರತೀಯ […]

ಅಂತಾರಾಷ್ಟ್ರೀಯ

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ : ಸಾವನ್ನಪ್ಪಿದವರಚಸಂಖ್ಯೆ 13ಕ್ಕೆ ಏರಿಕೆ

ಬೆಂಗಳೂರುprajakiran.com, ಡಿ. 08: ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೆ ಈಡಾಗಿರುವ ಘಟನೆ ತಮಿಳುನಾಡಿನ ಕೂನೂರು ಬಳಿ ಸಂಭವಿಸಿದೆ‌ ಸೇನೆ ಮುಖ್ಯಸ್ಥ ಬಿಪಿನ್ ರಾವತ್ ಸೇರಿ ಹದಿನಾಲ್ಕು ಜನ ಪ್ರಯಾಣಿಸುತ್ತಿದ್ದ ಸೇನೆಯ ಹೆಲಿಕಾಪ್ಟರ್ ಇದಾಗಿತ್ತು. ತಕ್ಷಣ ತಮಿಳುನಾಡಿನ ಅಂಬುಲೆನ್ಸ್ ಮೂಲಕ ವೆಲಿಂಗ್ಟನ್ ಸೇನೆ ಆಸ್ಪತ್ರೆಗೆ ಸೇರಿಸಲಾಯಿತು ಇದರಲ್ಲಿ ಸೇನೆ ಮುಖ್ಯಸ್ಥ ಬಿಪಿನ್ ರಾವತ್ ಅವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ಸುದ್ದಿ ಕೇಳಿ ದಿಗ್ಭ್ರಮೆ […]

ಅಂತಾರಾಷ್ಟ್ರೀಯ

ಧಾರವಾಡದಲ್ಲಿ ಬೆಂಗಳೂರಿನ ಹಿರಿಯ ಅರಣ್ಯ ಅಧಿಕಾರಿ ಮೇಲೆ ಒಂದೂವರೆ ವರ್ಷದ ನಂತರ ಅತ್ಯಾಚಾರ ಕೇಸ್ ತನಿಖೆ ಆರಂಭ​​……!

ಧಾರವಾಡ prajakiran.com : ಅತ್ಯಾಚಾರ ಕೇಸ್​​ನಲ್ಲಿ ಧಾರವಾಡದ ಹಿರಿಯ ಅರಣ್ಯ ಅಧಿಕಾರಿಯೊಬ್ಬರ ಮೇಲೆ ಕೊನೆಗೂ ತನಿಖೆ ಆರಂಭಗೊಂಡಿದೆ. ಒಂದೂವರೆ ವರ್ಷದ ನಂತರ ಅತ್ಯಾಚಾರ ಕೇಸ್​​ ಬೆಳಕಿಗೆ ಬಂದಿದೆ. ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಅತ್ಯಾಚಾರ ಮಾಡಿದ್ದಾರೆ ಎಂದು ನೋಂದ ಯುವತಿ ಆರೋಪಿಸಿದ್ದಾಳೆ‌. ಆ ಅಧಿಕಾರಿ ಪ್ರಭಾವಿಯಾಗಿದ್ದು, ಹಿರಿಯ ಅರಣ್ಯ ಅಧಿಕಾರಿ ಪ್ರಸ್ತುತ ಬೆಂಗಳೂರಿನ ಅರಣ್ಯ ಭವನದಲ್ಲಿ ಸಿಸಿಎಫ್ ಆಗಿರುವ ರವಿಶಂಕರ್ ವಿರುದ್ಧ ರೇಪ್ ಕೇಸ್​ ದಾಖಲು ಆಗಿದ್ದು, ತನಿಖೆ ಚುರುಕು ಪಡೆದಿದೆ. ದೂರು ಕೊಟ್ಟ ಯುವತಿ ನೀಡಿದ ಸಾಕ್ಷ್ಯ […]

ಅಂತಾರಾಷ್ಟ್ರೀಯ

ಕೋವಿಡ್ ಮೂರು ಪ್ರಕರಣಗಳು ಕಂಡ ಬಂದಲ್ಲಿ ಕ್ಲಸ್ಟರ್

ಬೆಂಗಳೂರು prajakiran.com ಡಿ. 04: ಕೋವಿಡ್ ನ ಮೂರು ಪ್ರಕರಣಗಳು ಕಂಡ ಬಂದಲ್ಲಿ ಕ್ಲಸ್ಟರ್ ಎಂದು ಘೋಷಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕೋವಿಡ್ ನ ಹೊಸ ರೂಪಾಂತರ ತಳಿ ಒಮಿಕ್ರಾನ್ ಕುರಿತು ಪ್ರಾಥಮಿಕ ವರದಿ ಬಂದಿದ್ದು, ಪೂರ್ಣ ಪ್ರಮಾಣದ ವರದಿ ಪಡೆಯಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಇದಕ್ಕೆ ಅನುಸರಿಸುತ್ತಿರುವ ಚಿಕಿತ್ಸಾ ನಿಯಮಗಳನ್ನು ತಿಳಿದುಕೊಳ್ಳಲು ಸೂಚಿಸಲಾಗಿದೆ. ಪ್ರಸ್ತುತ […]

ಅಂತಾರಾಷ್ಟ್ರೀಯ

ಶಾಲೆ, ಕಾಲೇಜುಗಳು ಸಭೆ, ಸಮಾರಂಭ ನಡೆಸುವಂತಿಲ್ಲ, ಸಮ್ಮೇಳನ, ಮದುವೆಗೆ 500 ಜನ ಮಾತ್ರ ಸೀಮಿತ……!

ಬೆಂಗಳೂರು prajakiran.com : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್ ನಿಂದ ಕೋವಿಡ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಪರಿಣತರು ಮತ್ತು ಹಿರಿಯ ಅಧಿಕಾರಿಗಳ ಸಭೆಯ ಮುಖ್ಯಾಂಶಗಳು: 1. ಓಮಿಕ್ರಾನ್ ರೂಪಾಂತರಿ ತಳಿಯ ವೈರಸ್ ನಿಂದ ಎರಡು ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದೆ. ಇಡೀ ವಿಶ್ವದಲ್ಲಿ ಸುಮಾರು 400 ಪ್ರಕರಣಗಳು ಈ ವರೆಗೆ ವರದಿಯಾಗಿದೆ. 2. ಅಧಿಕೃತವಾಗಿ ಈ ಪ್ರಕರಣಗಳ ಕುರಿತು ಯಾವುದೇ ಅಧ್ಯಯನ ವರದಿ ಬಂದಿಲ್ಲ. ಆದರೆ […]

ಅಂತಾರಾಷ್ಟ್ರೀಯ

ರಾಜ್ಯದಲ್ಲಿ ಒಮಿಕ್ರಾನ್ ತಳಿ ಪತ್ತೆ : ಔಷಧ, ಚಿಕಿತ್ಸೆ ನಿಯಮಗಳ ಬಗ್ಗೆ ತಜ್ಞರೊಂದಿಗೆ ಸಭೆ ನಡೆಸಿದ ಸಿಎಂ

ಬೆಂಗಳೂರು prajakiran.com ಡಿ. 03: ರಾಜ್ಯದಲ್ಲಿ ಇಬ್ಬರಿಗೆ ಕರೊನಾದ ಒಮಿಕ್ರಾನ್ ರೂಪಾಂತರಿ ತಳಿ ಜಿನೋಮ್ ಸೀಕ್ವೆನ್ಸಿಂಗ್ ಮೂಲಕ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ,ಯಾವ ರೀತಿಯ ಔಷಧ ಹಾಗೂ ಚಿಕಿತ್ಸೆಯ ನಿಯಮಗಳನ್ನು ಪಾಲಿಸಬೇಕೆನ್ನುವ ಬಗ್ಗೆ ಇಂದು ತಜ್ಞರ ಸಭೆ ನಡೆಸಿ ಮಾಹಿತಿ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ದೆಹಲಿಯಿಂದ ಇಂದು ಬೆಂಗಳೂರಿಗೆ ಹಿಂದುರುಗಿದ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಗಳಿಗೆ ಪ್ರತಿಕ್ರಿಯೆ ನೀಡಿದರು. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲು ಈಗಾಗಲೇ ಸೂಚನೆ […]