ಅಂತಾರಾಷ್ಟ್ರೀಯ

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಪ್ರಶ್ನೇಯೇ ಇಲ್ಲ ಎಂದ ಧಾರವಾಡ ಪಶ್ಚಿಮ ಶಾಸಕ ಅರವಿಂದ ಬೆಲ್ಲದ

ಧಾರವಾಡ prajakiran.com : ರಾಜ್ಯದ ಬಿಜೆಪಿ ಸರಕಾರದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹೆಸರು ಕೇಳಿಬಂದ ನಂತರ ಬಸವರಾಜ ಬೊಮ್ಮಾಯಿ ಸರಕಾರದಲ್ಲಿ ಮಂತ್ರಿ ಸ್ಥಾನವು ಸಿಗದೆ ಮುನಿಸಿಕೊಂಡಿರುವ ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಭಾರತೀಯ ಜನತಾ ಪಕ್ಷವನ್ನು ತೊರೆಯುವುದಕ್ಕೆ ಚಿಂತನೆ ನಡೆಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪ್ರತಿಯಾಗಿ ಸ್ಪಷ್ಟನೆ ನೀಡಿರುವ ಶಾಸಕ ಅರವಿಂದ ಬೆಲ್ಲದ ಇದು ಸುಳ್ಳು ಸುದ್ದಿ ಹಾಗೂ ಕಪೋಲಕಲ್ಪಿತ ಸುದ್ದಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಅದರ ಸಂಪೂರ್ಣ ವಿವರ ಹೀಗಿದೆ. ಆತ್ಮೀಯರೇ., […]

ಅಂತಾರಾಷ್ಟ್ರೀಯ

ಹಿಂದೂ ಸಂಸ್ಕೃತಿ ನಾಶ ಮಾಡುವ ಯತ್ನದಿಂದ ಬಿಜೆಪಿ ಸರಕಾರ ಹಿಂದೆ ಸರಿಯಲಿ : ದಿಂಗಾಲೇಶ್ವರ ಶ್ರೀ

ಧಾರವಾಡ prajakiran.com : ಹಿಂದೂ ಸಂಸ್ಕೃತಿ ನಾಶ ಮಾಡುವ ಮತ್ತು ವೀರಶೈವ-ಲಿಂಗಾಯತ ದೇವಸ್ಥಾನಗಳನ್ನು ತೆರವುಗೊಳಿಸುವ ಯತ್ನದಿಂದ ಬಿಜೆಪಿ ಸರಕಾರ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಬಿಜೆಪಿ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಾಲೇಹೊಸೂರು ದಿಂಗಾಲೇಶ್ವರ ಸ್ವಾಮೀಜಿ ಎಚ್ಚರಿಕೆ ನೀಡಿದರು. ಅವರು ಶನಿವಾರ ನಗರದ ಲಿಂಗಾಯತ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅಧಿಕಾರಿಗಳು ನೆಲಸಮಗೊಳಿಸಿರುವ ನಂಜನಗೂಡಿನ ಪುರಾತನ ದೇವಾಲಯವನ್ನು ಪುನಃ ನಿರ್ಮಾಣ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ದೇವಾಲಯ ಕೆಡುವ ಕುರಿತು ಸುದ್ದಿಗಳು ಮಾಧ್ಯಮಗಳಲ್ಲಿ ಇದೀಗ ಹರಿದಾಡುತ್ತಿದೆ, ರಾಜ್ಯದಲ್ಲಿ ನಡೆದಿರುವ […]

ಅಂತಾರಾಷ್ಟ್ರೀಯ

ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾವಚಿತ್ರವಿದ್ದ ಬ್ಯಾನರ್ ಗೆ ಕಪ್ಪು ಮಸಿ ಎರಚಿದ ಕರವೇ……!

ಧಾರವಾಡ prajakiran.com : ರಾಜ್ಯದಲ್ಲಿ ಹಿಂದಿ ದಿವಸ‌ ಅಚರಣೆ ವಿರೋಧ ಹಿನ್ನೆಲೆಯಲ್ಲಿ ಕೇಂದ್ರದ ಕಲ್ಲಿದ್ದಲು ಮತ್ತು ಗಣಿ ಸಚಿವರು ಆಗಿರುವ ಧಾರವಾಡದ ಸಂಸದ ಪ್ರಹ್ಲಾದ ಜೋಶಿ ಭಾವಚಿತ್ರವಿದ್ದ ಬ್ಯಾನರ್ ಗೆ ಧಾರವಾಡ ಜಿಲ್ಲೆಯ ಕರವೇ ಕಾರ್ಯಕರ್ತರು ಕಪ್ಪು ಮಸಿ ಎರಚಿದ ಘಟನೆ ಮಂಗಳವಾರ ನಡೆದಿದೆ. ಧಾರವಾಡದ ದಕ್ಷಿಣ ಭಾರತ ಹಿಂದಿ‌ ಪ್ರಚಾರ ಸಭಾ ಕಚೇರಿ ಎದುರಿನ ಬ್ಯಾನರ್‌ನಲ್ಲಿನ ಭಾವಚಿತ್ರಕ್ಕೆ ಕರವೇ ಶಿವರಾಮೆಗೌಡ ಬಣದ ಜಿಲ್ಲಾಧ್ಯಕ್ಷ ಪರಮೇಶ ಕಾಳೆ ಹಾಗೂ ತುಳಜಪ್ಪ ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. […]

ಅಂತಾರಾಷ್ಟ್ರೀಯ

ಗುಜರಾತ್ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಗೆ ಶುಭ ಕೋರಿದ ಬಸವರಾಜ ಬೊಮ್ಮಾಯಿ

ಗಾಂಧಿನಗರ, (ಗುಜರಾತ) prajakiran.com ಸೆ 13: ಗುಜರಾತಿನ 17ನೇ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್ ಅವರಿಗೆ‌ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಕೋರಿದರು. ಗಾಂಧಿನಗರದ ರಾಜಭವನದಲ್ಲಿ ನೂತನ ಸಿಎಂ ಪಟೇಲ್ ಅವರನ್ನು ಇಂದು ಮಧ್ಯಾಹ್ನ ಭೇಟಿ ಮಾಡಿದರು. ವಿಶೇಷ ವಿಮಾನದ ಮೂಲಕ ಗಾಂಧಿನಗರಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ಎದುರಿಸುವಂತೆ ಶುಭ ಕೋರಿದರು. ಬೆಂಗಳೂರಿನಿಂದ ಮುಖ್ಯಮಂತ್ರಿಗಳೊಂದಿಗೆ ತೆರಳಿದ್ದ ಸಚಿವರಾದ ಆರ್ ಅಶೋಕ್, ಮುರುಗೇಶ್ ನಿರಾಣಿ, ಡಾ. ಕೆ ಸುಧಾಕರ್ ಅವರೂ […]

ಅಂತಾರಾಷ್ಟ್ರೀಯ

ಕೊರೊನಾ ನಿಯಂತ್ರಣದಲ್ಲಿ ರಾಜ್ಯದ ಕ್ರಮಗಳ ಬಗ್ಗೆ ಅಮಿತ್ ಷಾ ಮೆಚ್ಚುಗೆ

ದಾವಣಗೆರೆ prajakiran. com ಸೆ. 2 : ದೇಶ ಮತ್ತು ಜಗತ್ತು ಹಿಂದೆಂದೂ ಕಂಡಿರದ, ಮಾನವಕುಲಕ್ಕೇ ಸವಾಲಾಗಿದ್ದ ಕೊರೊನಾ ಮಹಾಮಾರಿಯನ್ನು ಕರ್ನಾಟಕ ಸರ್ಕಾರ ಅತ್ಯುತ್ತಮವಾಗಿ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕ ಸರ್ಕಾರವನ್ನು ಮುಕ್ತಕಂಠದಿಂದ ಪ್ರಶಂಸಿಸಿದರು. ಕರ್ನಾಟಕ ರಾಜ್ಯ ಮೊದಲಿಗೆ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹಾಗೂ ಈಗ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕೊರೊನಾ ವಿರುದ್ಧ ಸಮರ್ಥವಾಗಿ ಹೋರಾಡಿದೆ. ಈ ವರೆಗೆ ಸುಮಾರು 5.2 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. […]

ಅಂತಾರಾಷ್ಟ್ರೀಯ

ಭಯೋತ್ಪಾದಕನ ನಂಟು ಭಟ್ಕಳದಲ್ಲಿ ಎನ್ .ಐ.ಎ ಯಿಂದ ಮೂವರು ವಶಕ್ಕೆ…..!?

ಕಾರವಾರ prajakiran.com : ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ .ಐ. ಎ ಅಧಿಕಾರಿಗಳ ತಂಡ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ದಾಳಿ ನಡೆಸಿದೆ. ಭಟ್ಕಳದ ಉಮರ್‌ ಸ್ಟ್ರೀಟ್ ,ತೆಂಗಿನ ಗುಂಡಿ ಹಾಗೂ ಸಾಗರ ರಸ್ತೆಯಲ್ಲಿರುವ ಮನೆಗಳಿಗೆ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದೆ. ಭಟ್ಕಳದ ಅಮೀನ್ ಜುವೇಬ್, ಜವಾದ್ ಎಂಬ ಇಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. ಈ ಹಿಂದೆ ದುಬೈ ನಲ್ಲಿ ಬಂಧನಕ್ಕೊಳಕ್ಕಾಗಿರುವ ಭಯೋತ್ಪಾದಕ ನೋಬ್ಬನ ತಮ್ಮನನ್ನೂ ಎನ್ .ಐ.ಎ […]

ಅಂತಾರಾಷ್ಟ್ರೀಯ

ರಾಜ್ಯದ ಆರೋಗ್ಯ ಮೂಲಸೌಕರ್ಯ ಅಭಿವೃದ್ದಿಗೆ ಕೇಂದ್ರದಿಂದ 800 ಕೋಟಿ ನೆರವು

ನವದೆಹಲಿ prajakiran.com  ಜುಲೈ 31 : ಕೋವಿಡ್ 3 ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ 800 ಕೋಟಿ ರೂ. ಮಂಜೂರು ಮಾಡಲು ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಅವರು ಸಮ್ಮತಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.  ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. […]

ಅಂತಾರಾಷ್ಟ್ರೀಯ

ಕೇಂದ್ರ ಹಣಕಾಸು ಸಚಿವೆ ಭೇಟಿ ಮಾಡಿ ಜಿಎಸ್ ಟಿ ಪರಿಹಾರ ಬಿಡುಗಡೆಗೆ ಮನವಿ ಮಾಡಿದ ಮುಖ್ಯಮಂತ್ರಿ

ನವದೆಹಲಿ prajakiran. com ಜುಲೈ 31 : ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ಜಿ.ಎಸ್.ಟಿ ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಬಿಡುಗಡೆ ಕುರಿತು ಚರ್ಚಿಸಿದರು. ಈ ವರ್ಷ ಸುಮಾರು 18 ಸಾವಿರ ಕೋಟಿ ಪರಿಹಾರವನ್ನು […]

ಅಂತಾರಾಷ್ಟ್ರೀಯ

ಕೇಂದ್ರದ ಗೃಹ ಸಚಿವ ಅಮಿತ್ ಶಾ ಸೇರಿ ಹಲವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ

ನವದೆಹಲಿ prajakiran.com : ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಬಳಿಕ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ, ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ, ಅಭಿನಂದಿಸಿದರು. ಅಲ್ಲದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ನೀರಾವರಿ ವಿಷಯ ಸೇರಿದಂತೆ ಜ್ವಲಂತ […]

ಅಂತಾರಾಷ್ಟ್ರೀಯ

ಸರ್ಕಾರದಿಂದ ಪೆಗಾಸಿಸ್ ದುರ್ಬಳಕೆ : ದೇಶದ 50 ಕ್ಕೂ ಹೆಚ್ಚು ಪ್ರಮುಖ ವ್ಯಕ್ತಿಗಳ ಫೋನ್ ಕದ್ದಾಲಿಕೆ

ಹುಬ್ಬಳ್ಳಿ prajakiran.com :  ರಾಜ್ಯದ ರಾಜಕಾರಣದಲ್ಲಿ ಹೊಸ ಅಲೆಗೆ ಕಾರಣವಾಗಿರುವ, ಪೆಗಾಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯೇ ಭಾರತ ಸರ್ಕಾರ ತಮ್ಮ ತಂತ್ರಾಂಶ ಖರೀದಿ ಮಾಡಿದೆ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ದೇಶದ 50 ಕ್ಕೂ ಹೆಚ್ಚು ಪ್ರಮುಖ ವ್ಯಕ್ತಿಗಳ ಫೋನ್ ಕದ್ದಾಲಿಕೆ ನಡೆದಿರುವುದಕ್ಕೆ ಕಾರಣವಾಗಿದೆ. ಇನ್ನೂ ಒಂದು ತಂತ್ರಾಂಶಕ್ಕೆ 700 ಕೋಟಿ ಖರ್ಚಾಗಲಿದ್ದು ಅದರಂತೆ 50 ಅಂದರೆ 2500 ಕೋಟಿ ಜನರ ತೆರಿಗೆ ಹಣವನ್ನು ಸರ್ಕಾರ ದುರುಪಯೋಗ ಪಡಿಸಿಕೊಂಡಿದೆ ಎಂದು ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ದತ್ತಾ […]