hubli kims
ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಗುರುವಾರವೂ ಬರೋಬ್ಬರಿ 7 ಸಾವು, 75 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಗುರುವಾರ ಸಂಜೆ ಮತ್ತೆ ಹೊಸದಾಗಿ 75 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 832ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಬುಧವಾರ 7 ಜನ ಸಾವನ್ನಪ್ಪಿದ್ದರೆ ಗುರುವಾರವೂ  ಬರೋಬ್ಬರಿ 7 ಜನ ಸಾವನ್ನಪ್ಪಿದ್ದಾರೆ. 19 ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಿದೆ. ಧಾರವಾಡ ಜಿಲ್ಲೆಯಲ್ಲಿ ಜು. […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಮೊದಲ ದಿನವೇ 12 ಜನರಿಗೆ ಮನೆಯಲ್ಲಿಯೇ ಚಿಕಿತ್ಸೆ

ಧಾರವಾಡ prajakiran.com : ಕೋವಿಡ್ ಸೋಂಕು ಇದ್ದರೂ ಕೂಡ ರೋಗ ಲಕ್ಷಣ ಇಲ್ಲದವರು ಮತ್ತು ಸೌಮ್ಯ ಲಕ್ಷಣವುಳ್ಳ ಜನರಿಗೆ ತಮ್ಮ ಮನೆಗಳಲ್ಲಿಯೇ ಪ್ರತ್ಯೇಕವಾಗಿ ಇದ್ದು ಟೆಲಿ ಕನ್ಸಲ್ಟೇಷನ್ ಮೂಲಕ ಚಿಕಿತ್ಸೆ ಪಡೆಯುವ  ಅವಕಾಶ ಕಲ್ಪಿಸಿದ ಮೊದಲ ದಿನವೇ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ 12 ಜನ ಸ್ವಯಂ ಪ್ರೇರಣೆಯಿಂದ ಈ ಮಾದರಿಯ ಚಿಕಿತ್ಸೆ ಆಯ್ದುಕೊಂಡಿದ್ದಾರೆ. ದೇಶದಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ , ಕೋವಿಡ್ ಸೋಂಕು ಇದ್ದರೂ ರೋಗ ಲಕ್ಷಣ ರಹಿತರು  ಮನೆಗಳಲ್ಲಿಯೇ ಇದ್ದು ಚಿಕಿತ್ಸೆ ಪಡೆಯಲು ಸರ್ಕಾರ ನಿಯಮಗಳನ್ನು […]

ರಾಜ್ಯ

ಧಾರವಾಡದ ಖಾಸಗಿ ಆಸ್ಪತ್ರೆಗಳಲ್ಲಿ ಶೇ.೫೦ ರಷ್ಟು ಹಾಸಿಗೆ ಕೋವಿಡ್ ಗೆ ಮೀಸಲು

ಧಾರವಾಡ prajakiran.com : ಕೋವಿಡ್-೧೯ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿರುವುದರಿಂದ ಸರ್ಕಾರಿ ಆಸ್ಪತ್ರೆಗಳು ಹಾಗೂ ಕಿಮ್ಸ್ ಜೊತೆಗೆ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಣಿಯಾಗಿರುವ ಖಾಸಗಿ ಆಸ್ಪತ್ರೆಗಳೂ ಕೂಡಾ ತಮ್ಮಲ್ಲಿರುವ ಒಟ್ಟು ಹಾಸಿಗೆಗಳ ಸಾಮರ್ಥ್ಯದ ಶೇ.೫೦ ರಷ್ಟು ಕೋವಿಡ್ ಚಿಕಿತ್ಸೆಗೆ ಮೀಸಲಿಡಲು ಒಪ್ಪಿಗೆ ನೀಡಿವೆ.  ಜಿಲ್ಲಾಡಳಿತ ಅಂತಹ ಆಸ್ಪತ್ರೆಗಳಿಗೆ ಅಗತ್ಯ ಸಹಕಾರ ನೀಡಲಿದೆ. ಇಂದಿನಿಂದಲೇ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಪ್ರಾರಂಭವಾಗಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಖಾಸಗಿ […]

ರಾಜ್ಯ

ಸೋಂಕು ಲಕ್ಷಣ ರಹಿತರಿಗೆ ಮನೆಯಲ್ಲಿಯೇ ಪ್ರತ್ಯೇಕವಾಗಿರಲು ಅವಕಾಶ

ಧಾರವಾಡ prajakiran.com : ಕೋವಿಡ್ ಸೋಂಕು ದೃಢಪಟ್ಟಿದ್ದರು ಕೂಡಾ ಸೋಂಕಿನ ಲಕ್ಷಣ ಇಲ್ಲದವರು ಮತ್ತು ಸೌಮ್ಯ ಲಕ್ಷಣಗಳಿರುವವರಿಗೆ ಆರೋಗ್ಯ ತಂಡದಿಂದ ನಡೆಸಲಾಗುವ ಪ್ರಾಥಮಿಕ ಪರಿಶೀಲನೆ ಹಾಗೂ ಟ್ರಯೇಜ್ ಶಿಫಾರಸ್ಸು ಆಧರಿಸಿ ಮನೆಯಲ್ಲಿಯೇ ಪ್ರತ್ಯೇಕವಾಗಿರಲು ಅವಕಾಶ ನೀಡಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತಾಲಯ ತಿಳಿಸಿದೆ. ಈ ಕುರಿತು ಮಾರ್ಗಸೂಚಿ ಪ್ರಕಟಿಸಿರುವ ಆಯುಕ್ತಾಲಯವು ಪ್ರತ್ಯೇಕವಾಗಿರಲು ಮನೆಯು ಸೂಕ್ತವಾಗಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಬೇಕು. ಪ್ರತ್ಯೇಕತೆಯ ಅವಧಿಯಲ್ಲಿ ವ್ಯಕ್ತಿಯನ್ನು ದೈನಂದಿನ ಅನುಸರಣೆ ಮಾಡಲು ಟೆಲಿ ಕನ್ಸಲ್ಟೇಶನ್ ಸಂಪರ್ಕ ಸ್ಥಾಪಿಸಲಾಗುವುದು. […]

ರಾಜ್ಯ

ಧಾರವಾಡ ಜಿಲ್ಲೆಯ ಮುಂಗಾರು, ಅತೀವೃಷ್ಟಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಸೂಚನೆ

ಧಾರವಾಡ prajakiran.com : ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಅತೀವೃಷ್ಟಿ ಸಂಭವಿಸಿದರೆ ಪರಿಸ್ಥಿತಿ ನಿರ್ವಹಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ೨೦೧೯ ರ ಆಗಸ್ಟ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಯ ಪ್ರಮಾಣ ಮತ್ತು ಪರಿಹಾರ ಕಾರ್ಯಗಳ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಮನೆಗಳ ಪುನರ್‌ನಿರ್ಮಾಣ, ನೆರೆ ಬಾಧಿತ […]

ರಾಜ್ಯ

ಸೇಡಂ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ, ಪತ್ನಿ, ಪುತ್ರನಿಗೂ ಸೋಂಕು…!

ಬೆಂಗಳೂರು prajakiran.com : ರಾಜ್ಯದಲ್ಲಿ ಕರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದ್ದು, ರಾಜ್ಯದಲ್ಲಿ ಈವರೆಗೆ ಐವರು ಶಾಸಕರು ಹಾಗೂ ಒಬ್ಬ ಸಂಸದರಿಗೆ ವಕ್ಕರಿಸಿರುವ ಕರೋನಾ ಇದೀಗ ಆರನೇ ಶಾಸಕರಿಗೆ ಕರೋನಾ ಹರಡಿರುವುದು ದೃಢಪಟ್ಟಿದೆ. ಕಲಬುರಗಿ ಜಿಲ್ಲೆಯ ಸೇಡಂ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ ತೇಲ್ಕೂರಅವರಿಗೆ ಕರೋನಾ ವ್ಯಾಪಿಸಿದೆ. ಮೂರು ದಿನಗಳ ಹಿಂದೆಯಷ್ಟೇ ಅವರ ಆಪ್ತ ಕಾರ್ಯದರ್ಶಿಗೂ ಕರೋನಾ ಹಬ್ಬಿತ್ತು. ಅವರಿಗೆ ಕರೋನಾ ಬಂದ ಬೆನ್ನಲ್ಲೇ ಶಾಸಕರು ತಮ್ಮ ಗಂಟಲು ದ್ರವ ಮಾದರಿಯನ್ನು […]

ರಾಜ್ಯ

ರಾಜ್ಯದ ಕೆಲ ಜಿಲ್ಲೆಗಳು ಕೈ ತಪ್ಪಿ ಹೋಗುತ್ತಿವೆ ಎಂದ ಮುಖ್ಯಮಂತ್ರಿ

ಬೆಂಗಳೂರು prajakiran.com : ರಾಜ್ಯದಲ್ಲಿ ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದ್ದು, ನಿಯಂತ್ರಣ ಬಾರದಿರುವುದನ್ನು ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ. ಗುರುವಾರ ಸಚಿವ ಸಂಪುಟ ಸಭೆಗೆ ತೆರಳುವ ಮುನ್ನ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಕೆಲ ಜಿಲ್ಲೆಗಳು ಕೈ ತಪ್ಪಿ ಹೋಗುತ್ತಿವೆ ಎಂದರು. ಈ ಬಗ್ಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸರು ಅದರ ನಿಯಂತ್ರಣಕ್ಕಾಗಿ ಹಗಲುರಾತ್ರಿ ಶ್ರಮಿಸುತ್ತಿದ್ದಾರೆ. ಆದರೆ ಅದು ಕಷ್ಟಸಾಧ್ಯವಾಗುತ್ತಿದೆ ಎಂದರು. ಈ ಬಗ್ಗೆ ಇನ್ನೊಮ್ಮೆ ಅವರ ಸಭೆ ನಡೆಸಿ ಸಂಪೂರ್ಣ ಚಿತ್ರ […]

hubli kims
ರಾಜ್ಯ

ಹುಬ್ಬಳ್ಳಿ ಕಿಮ್ಸ್ ನ ಮತ್ತೋಬ್ಬ ಡಾಕ್ಸರಗೂ ಕರೋನಾ ಕಂಟಕ …!

ಹುಬ್ಬಳ್ಳಿ prajakiran.com : ಉತ್ತರ ಕರ್ನಾಟಕ ಭಾಗದ ಹಾಗೂ ವಿಶೇಷವಾಗಿ ಧಾರವಾಡ ಜಿಲ್ಲೆಯ ಏಕೈಕ ಆಶಾಕಿರಣವಾಗಿರುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೋನಾ ಕಾಟ ನೀಡುತ್ತಿದೆ. ಜಿಲ್ಲೆಯ 260ಕ್ಕೂ ಹೆಚ್ಚು ಕರೋನಾ ಸೋಂಕಿತರನ್ನು ಗುಣಮುಖರನ್ನಾಗಿ ಮನೆಗೆ ಕಳುಹಿಸಿರುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ವೈದ್ಯರಿಗೂ ಕರೋನಾ ಕಾಡುತ್ತಿದೆ. ಮಂಗಳವಾರವಷ್ಟೇ ಕಿಮ್ಸ್ ಕ್ಯಾಂಪಸ್ ನ ಮೂವರು ಸಿಬ್ಬಂದಿ ಹಾಗೂ ಕೋವಿಡ್ ಸೆಂಟರ್ ನಲ್ಲಿ ಮೂವರು ನರ್ಸ್ ಗಳು ಸಹ ಸೋಂಕಿನಿಂದ ಬಳಲುತ್ತಿದ್ದರು. ಕಳೆದ ಹಲವು ದಿನಗಳ ಹಿಂದೆಯಷ್ಟೇ  ಧಾರವಾಡದ ಕೆಂಪಗೇರಿಯಲ್ಲಿ ವಾಸಿಸುವ […]

ರಾಜ್ಯ

ಹುಬ್ಬಳ್ಳಿ-ಧಾರವಾಡ ಮಾಜಿ ಮೇಯರ್, ಮಾಜಿ ಸದಸ್ಯನಿಗೂ ಕರೊನಾ….!

ಹುಬ್ಬಳ್ಳಿ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕರೋನಾಅಟ್ಟಹಾಸ ಮುಂದುವರೆದಿದ್ದು, ರಾಜಕೀಯ ಮುಖಂಡರಿಗೂ ಅದರ ಬಿಸಿ ತಾಕಲು ಆರಂಭವಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿಯ ಮುಖಂಡರು ಆಗಿರುವ ಮಾಜಿ ಮಹಾಪೌರ ಹಾಗೂ ಮಾಜಿಸದಸ್ಯರೊಬ್ಬರಿಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 52 ವರ್ಷದ ಮಾಜಿ ಮೇಯರ್ ಹುಬ್ಬಳ್ಳಿಯ ಸಿಬಿಟಿ ಬಳಿ ನಿವಾಸಿಯಾಗಿರುವ ಅವರು ಕಳೆದ ಬಿಜೆಪಿ ಅವಧಿಯಲ್ಲಿ ಮಹಾಪೌರರಾಗಿದ್ದರು. ಇನ್ನೂ ಎರಡು ದಿನಗಳ ಹಿಂದಷ್ಟೇ ಮಹಾನಗರ ಪಾಲಿಕೆಯ ಬಿಜೆಪಿಯ ಮಾಜಿ ಸದಸ್ಯರೊಬ್ಬರಲ್ಲಿ ಕರೊನಾ ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಇಬ್ಬರಿಗೂ ಕೋವಿಡ್ […]

ರಾಜ್ಯ

ಧಾರವಾಡ 20, ಹುಬ್ಬಳ್ಳಿ 59 ಸೇರಿ 89 ಕೋವಿಡ್ ಪಾಸಿಟಿವ್

 ಧಾರವಾಡ prajakiran.com : ಜಿಲ್ಲೆಯಲ್ಲಿ ಬುಧವಾರ 89 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 757 ಕ್ಕೆ ಏರಿದೆ. ಇದುವರೆಗೆ 279 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 458 ಪ್ರಕರಣಗಳು ಸಕ್ರಿಯವಾಗಿವೆ. ಜಿಲ್ಲೆಯಲ್ಲಿ ಈವರೆಗೆ 20 ಜನ ಮೃತಪಟ್ಟಿದ್ದಾರೆ  ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಸೋಂಕಿತರನ್ನು ಪಿ- 28409 ( 45 ವರ್ಷ,ಪುರುಷ ) ಹುಬ್ಬಳ್ಳಿ ವಡ್ಡರ ಓಣಿ ನಿವಾಸಿ. ಪಿ-24820 ಅವರೊಂದಿಗೆ ಸಂಪರ್ಕ ಹೊಂದಿದ್ದರು. ಪಿ-28410 ( 78 ವರ್ಷ,ಪುರುಷ) ಹುಬ್ಬಳ್ಳಿ […]