ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಮೂರು ದಿನಗಳ ಅವಧಿಯಲ್ಲಿ ಏಳು ಜನ ಮರಣ

ಧಾರವಾಡ prajakiran.com : ಕೋವಿಡ್ ನಿಂದಾಗಿ ಕಳೆದ ಮೂರು ದಿನಗಳ ಅವಧಿಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಏಳು ಜನ ಮೃತಪಟ್ಟಿದ್ದು, ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ ಇಪ್ಪತ್ತಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ತಿಳಿಸಿದ್ದಾರೆ. ಪಿ-28497 ( 70 ವರ್ಷ, ಪುರುಷ) ಹಾವೇರಿ ಜಿಲ್ಲೆಯವರು, ಜುಲೈ 5 ರಂದು ಮರಣ ಹೊಂದಿದ್ದಾರೆ. ನಿನ್ನೆ ಜುಲೈ 7 ರಂದು ಕೋವಿಡ್ ದೃಢಪಟ್ಟಿದೆ. ಪಿ-28461 (54 ವರ್ಷ, ಮಹಿಳೆ) ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಹಮ್ಮಿಗಿ ಗ್ರಾಮದವರು. […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಬುಧವಾರ ಬರೋಬ್ಬರಿ 7 ಸಾವು, 89 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಬುಧವಾರ ಸಂಜೆ ಮತ್ತೆ ಹೊಸದಾಗಿ 89 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 757ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಬುಧವಾರ  ಬರೋಬ್ಬರಿ 7 ಜನ ಸಾವನ್ನಪ್ಪಿದ್ದರೆ, 21 ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಿದೆ. ಧಾರವಾಡ ಜಿಲ್ಲೆಯಲ್ಲಿ ಜು. 5ರಂದು 18 ಜನರಿಗೆ ಹೇಗೆ ಕರೋನಾ […]

ರಾಜ್ಯ

ರಾಜ್ಯದಲ್ಲಿ ಬುಧವಾರ ಕರೋನಾಕ್ಕೆ 54 ಸಾವು, 2062  ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಬುಧವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 54  ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 2062 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ  28877 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ  778 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  11876   ಜನ ಗುಣಮುಖರಾಗಿದ್ದು,    16527  ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 452   ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ […]

ರಾಜ್ಯ

ವಿಜಯಪುರದಲ್ಲಿ ಆತಂಕ‌ ಸೃಷ್ಠಿಸಿದ  ಸೀಲ್ ಹಾಕಿದ್ದ ವ್ಯಕ್ತಿ ಓಡಾಟ….!

 ವಿಜಯಪುರ prajakiran.com : ಕೈಗೆ ಕ್ವಾರಂಟೈನ್ ಸೀಲ್ ಹೊಂದಿದ ವ್ಯಕ್ತಿಯ ಓಡಾಟದಿಂದ ಕೆಲ ಕಾಲ ವಿಜಯಪುರ ನಗರದಲ್ಲಿ ಜನತೆ ಭಯಭೀತರಾಗಿದ್ದ ಘಟನೆ ಬುಧವಾರ ನಡೆದಿದೆ. ವಿಜಯಪುರ ನಗರದ ಸ್ಟೇಷನ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ನಗರದ ಬಡಿಕಮಾನ ರಸ್ತೆಯಲ್ಲಿನ ಮಿನಿ‌ ಬಸ್ ನಿಲ್ದಾಣದಲ್ಲಿ ವ್ಯಕ್ತಿ ಕಾಣಿಸಿಕೊಂಡಿದ್ದ. ಇದರಿಂದಾಗಿ ಕ್ವಾರಂಟೈನ್ ನಿಂದ ತಪ್ಪಿಸಿಕೊಂಡು ಬಂದಿರುವ ಶಂಕೆ ವ್ಯಕ್ತಪಡಿಸಿ ಜನತೆ ಕಳವಳ ವ್ಯಕ್ತಪಡಿಸಿದರು. ಇತ ಹೋಂ ಕ್ವಾರಂಟೈನ್ ನಲ್ಲಿದ್ದನೋ ಅಥವಾ ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇದ್ದನೋ ಎಂಬುದು ಗೊತ್ತಾಗಿಲ್ಲ. ಸೀಲ್ […]

ರಾಜ್ಯ

ಹಾಸನದ ಇಬ್ಬರು ಪತ್ರಕರ್ತರಿಗೆ ವಕ್ಕರಿಸಿದ ಕರೋನಾ ….!

ಹಾಸನ prajakiran.com : ರಾಜ್ಯದಲ್ಲಿ ಕರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕರೋನಾ ಸೇನಾನಿಗಳಾದ ಪೊಲೀಸ್ , ಆರೋಗ್ಯ ಇಲಾಖೆ, ಪತ್ರಕರ್ತರಿಗೂ ಕಾಡುತ್ತಿದೆ. ಹಾಸನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಬ್ಬರು ಖಾಸಗಿ ಚಾನೆಲ್ ಗಳ ಪತ್ರಕರ್ತರಿಗೆ ಸೋಂಕು ಇರುವುದು ದೃಢವಾಗಿದೆ. ಅವರು ಐದು ದಿನಗಳ ಹಿಂದೆ ತಪಾಸಣೆ ಮಾಡಿಸಿಕೊಂಡಿದ್ದರು. ಆದರೆ ಬುಧವಾರ ವರದಿ ಬಂದಿದ್ದು, ಅದರಲ್ಲಿ ಪಾಸಿಟಿವ್ ಇರುವುದು ಖಚಿತಗೊಂಡಿದೆ. ಹೀಗಾಗಿ ಇಬ್ಬರನ್ನು ಕೋವಿಡ್ ನಿಯೋಜಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೇ ರೀತಿ ಅವರೊಂದಿಗೆ ಪ್ರಾಥಮಿಕ ಸಂಪರ್ಕ […]

ರಾಜ್ಯ

ಧಾರವಾಡದ ಸೋಮಾಪುರದಲ್ಲಿ ಕರೋನಾಗೆ 58 ವರ್ಷದ ವ್ಯಕ್ತಿ ಬಲಿ….!

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಕರೋನಾ ವೈರಸ್ ಗೆ  ಮತ್ತೊಂದು ಬಲಿಯಾಗಿದ್ದು, ಆ ಮೂಲಕ ಜಿಲ್ಲೆಯ ಸಾವಿನ ಸಂಖ್ಯೆ ಹದಿಮೂರಕ್ಕೆ ಏರಿಕೆಯಾಗಿದೆ. ಧಾರವಾಡ ತಾಲೂಕಿನ ಸೋಮಾಪುರ ಗ್ರಾಮದ ವ್ಯಕ್ತಿ P 25517 ನ ಸೋಂಕಿತ ಚಿಕಿತ್ಸೆ ಫಲಿಸದೆ ಮಂಗಳವಾರ ಮರಣ ಹೊಂದಿದ್ದಾನೆ ಎಂದು ಧಾರವಾಡ ಜಿಲ್ಲಾಡಳಿತ ತಿಳಿಸಿದೆ. 58 ವರ್ಷ ದ ಪುರುಷ, ನಿನ್ನೆ ಜುಲೈ 6 ರಂದು ಕೆಮ್ಮು, ನೆಗಡಿ, ಜ್ವರ ಲಕ್ಷಣದ ಕಾರಣದಿಂದ ಧಾರವಾಡ ಜಿಲ್ಲಾಸ್ಪತ್ರೆಗೆ ಬಂದು ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ […]

ರಾಜ್ಯ

ಧಾರವಾಡದಲ್ಲಿ ಮಾಸ್ಕ್ ಧರಿಸದೆ ಸಭೆಗೆ ಬಂದ ಅಧಿಕಾರಿಗೆ ಕೇಂದ್ರ‌ ಸಚಿವರಿಂದ ಬಿಸಿ

ಧಾರವಾಡ prajakiran.com :  ಕರೋನಾ ಭೀತಿಯಿಂದ ಎಲ್ಲರೂ ತತ್ತರಿಸಿಹೋಗಿದ್ದಾರೆ. ಇದಕ್ಕೆ ಕೇಂದ್ರ ಸಚಿವರು ಹೊರತಾಗಿಲ್ಲ. ಯಾರಾದರೂ ಮಾಸ್ಕ್ ಧರಿಸದೆ ಬಂದರೆ ಇಲ್ಲವೇ ಮನವಿ ಕೊಡಲು ಬಂದರೆ ಆ ಮನವಿ ಪತ್ರಕ್ಕೆ ಕೇಂದ್ರ ಸಚಿವರು ಸ್ಯಾನಟೈಸರ್ ಸಿಂಪಡಿಸಿ ಮನವಿ ಪತ್ರ ಸ್ವೀಕರಿಸುತ್ತಿದ್ದಾರೆ. ಹೌದು ಇದು ಅಚ್ಚರಿಯಾದ್ರೂ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಮಾಸ್ಕ್ ಧರಿಸದೆ ಸಭೆಗೆ ಆಗಮಿಸಿದ ಅಧಿಕಾರಿಗೆ ಕೇಂದ್ರ‌ ಸಚಿವ ಪ್ರಲ್ಹಾದ ಜೋಶಿ ಬಿಸಿ ತಾಕಿಸಿದರು. ಹಲವು ತಿಂಗಳ ಬಳಿಕ […]

ರಾಜ್ಯ

ಹುಬ್ಬಳ್ಳಿ-ಧಾರವಾಡ ಅಕ್ರಮ ಲೇ ಔಟ್ ತೆರವು ಬದಲಿಗೆ ಶಾಶ್ವತ ಪರಿಹಾರ ಕಂಡು ಹಿಡಿಯಲಿ : ಇಮ್ರಾನ್ ಕಳ್ಳಿಮನಿ

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ 250 ಕ್ಕಿಂತಲೂ ಅಧಿಕ ಅಕ್ರಮ ಲೇಔಟ್ ಗಳಿವೆ. ಇದಕ್ಕೆ ಹುಡಾ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಶಾಶ್ವತ ಪರಿಹಾರ ಕಂಡು ಹಿಡಿಯಬೇಕಿದೆ ಎಂದು ರಿಯಲ್ ಎಸ್ಟೇಟ್ ಉದ್ಯಮಿ ಇಮ್ರಾನ್ ಕಳ್ಳಿಮನಿ ಆಗ್ರಹಿಸಿದ್ದಾರೆ. ಅವರು ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಹುಡಾಕ್ಕೆ ನೂತನವಾಗಿ ಅಧ್ಯಕ್ಷರಾಗಿ ಬಂದ ತಕ್ಷಣ ತೆರವು ಕಾರ್ಯಾಚರಣೆ ನಡೆಸುವುದು ಆನಂತರ ಮತ್ತೇ ಬಿಟ್ಟು ಬಿಡುವುದು ಸಂಪ್ರದಾಯಕ್ಕೆ ಇತಿಶ್ರೀ ಹಾಡಬೇಕಿದೆ ಎಂದು ಹೇಳಿದರು. ಕಳೆದ […]

ರಾಜ್ಯ

ಧಾರವಾಡದಲ್ಲಿ ೧೭ ಕೋವಿಡ್ ಆಸ್ಪತ್ರೆಗಳಿವೆ ಎಂದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಧಾರವಾಡ prajakiran.com  : ಧಾರವಾಡದಲ್ಲಿ ೧೭ ಕೋವಿಡ್ ಆಸ್ಪತ್ರೆಗಳಿವೆ. ಅದರಲ್ಲಿ ಚಿಕಿತ್ಸೆಗೆ ಬರುವ ರೋಗಿಗಳಿಗೆ ಚಿಕಿತ್ಸೆ ನೀಡಲಾಗುವುದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ,  ಕಿಮ್ಸ್ ಆಸ್ಪತ್ರೆಗಳಲ್ಲಿ ಸಾಕಷ್ಟು ವೈದ್ಯರು ಹಾಗೂ ಸ್ಟಾಫ್ ನರ್ಸ್ ಗಳು ಇರುವುದರಿಂದ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ನರ್ಸ್ ಗಳ ಕೊರತೆಯಿಲ್ಲ ಎಂದರು. ಜಿಲ್ಲೆಯಲ್ಲಿ ಕೊರೊನಾ ಚಿಕಿತ್ಸೆಗೆ ೬,೩೬೪ ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಕೇರ್‌ಸೆಂಟರ್‌ಗಳಿಗೆ ಈಗಾಗಲೇ ೫೦೦ ಬೆಡ್‌ಗಳನ್ನು ೫ ಆಯುರ್ವೇದ ಆಸ್ಪತ್ರೆಗಳನ್ನು ಗುರುತಿಸಿದೆ. ಕಿಮ್ಸ್ […]

ರಾಜ್ಯ

ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಹಿಂಜರಿದರೆ ನಿರ್ದಾಕ್ಷಿಣ್ಯ ಕ್ರಮ

ಧಾರವಾಡ prajakiran.com :  ಜಗತ್ತನ್ನೇ ತಲ್ಲಣಗೊಳಿಸಿರುವ ಕೋವಿಡ್-೧೯ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಕೂಡಾ ಕೈಜೋಡಿಸಬೇಕು. ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಯಡಿ ಜಿಲ್ಲಾಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ್ ಜೋಶಿ ಹೇಳಿದರು.  ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ನಡೆದ ಆರೋಗ್ಯ ಕಾರ್ಯಪಡೆ ಸಭೆಯನ್ನುದ್ದೇಶಿಸಿ   ಮಾತನಾಡಿದರು.  ಖಾಸಗಿ ಆಸ್ಪತ್ರೆಗಳು ಈ ಕಠಿಣ ಸಂದರ್ಭದಲ್ಲಿ ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿಯಬಾರದು. ವಿಶ್ವ ಆರೋಗ್ಯ ಸಂಸ್ಥೆ […]