ರಾಜ್ಯ

ಧಾರವಾಡದ ಕೋವಿಡ್ ಕೇರ್ ಸೆಂಟರುಗಳ ನಿರ್ವಹಣೆಗೆ ತಂಡ ರಚನೆ

ಧಾರವಾಡ prajakiran.com : ಜಿಲ್ಲೆಯ ಕೋವಿಡ್ ನಿಯಂತ್ರಣಕ್ಕಾಗಿ ಅಂಬುಲೆನ್ಸ್ ಗಳ ನಿರ್ವಹಣೆ ಹಾಗೂ ಖಾಸಗಿ ಆಸ್ಪತ್ರೆಗಳ ಹಾಸಿಗೆಗಳ ಸಂಖ್ಯೆಗಳ ನಿರ್ವಹಣೆಗೆ ಎರಡು ಪ್ರತ್ಯೇಕ ತಂಡಗಳನ್ನು ರಚಿಸಿ ಜಿಲ್ಲಾಧಿಕಾರಿಗಳಾದ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ. ಅಂಬುಲೆನ್ಸ್ ನಿರ್ವಹಣೆ ತಂಡ : ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕೋವಿಡ್ ಸೋಂಕಿತರನ್ನು ಸ್ಥಳಾಂತರಿಸಲು ಭೂ ದಾಖಲೆಗಳ ಉಪನಿರ್ದೇಶಕಿ ನಜ್ಮಾ ಪೀರಜಾದೆ-೯೩೪೧೦೧೫೬೫೬, ಮಹಾನಗರಪಾಲಿಕೆ ಉಪ ಆಯುಕ್ತ ಶಂಕರಾನಂದ ಬನಶಂಕರಿ -೯೨೪೨೦೧೪೯೪೪ ಅವರನ್ನು ಸಂಪರ್ಕಿಸಬಹುದು. ಜಿಲ್ಲೆಯ ಉಳಿದ ತಾಲ್ಲೂಕುಗಳಲ್ಲಿ ಅಲ್ಲಿನ ತಹಸೀಲ್ದಾರ ಅವರನ್ನು ಸಂಪರ್ಕಿಸಬಹುದು. ಖಾಸಗಿ […]

ರಾಜ್ಯ

ಕೋವಿಡ್ ವರದಿ ಇನ್ನಷ್ಟು ತ್ವರಿತಗೊಳಿಸಬೇಕು ಎಂದ ಧಾರವಾಡ ಜಿಲ್ಲಾಧಿಕಾರಿ

ಧಾರವಾಡ prajakiran.com : ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಕೋವಿಡ್ ತಪಾಸಣೆ ಪ್ರಯೋಗಾಲಯ ವರದಿ ನೀಡುವ ಕಾರ್ಯವನ್ನು ಇನ್ನಷ್ಟು ತ್ವರಿತಗೊಳಿಸಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ನಡೆದ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಅಗತ್ಯ ಬಿದ್ದರೆ ತಾಲೂಕು ಕೇಂದ್ರಗಳಲ್ಲಿಯೂ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿ,  ಲಕ್ಷಣ ರಹಿತ  ರೋಗಿಗಳಿಗೆ  ಅಲ್ಲಿಯೇ ಚಿಕಿತ್ಸೆ ನೀಡಲಾಗುವುದು ಎಂದರು. ಆಯಾ ತಹಸೀಲ್ದಾರರಯ ಸ್ಥಳೀಯವಾಗಿ ಆಸ್ಪತ್ರೆ, ವಸತಿ ಶಾಲೆಗಳಲ್ಲಿ, ಹಾಸಿಗೆಗಳು, ಆಹಾರ […]

ರಾಜ್ಯ

ಧಾರವಾಡದ ಖಾಸಗಿ ಆಸ್ಪತ್ರೆಗಳಲ್ಲಿ ಶೇ.೫೦ ರಷ್ಟು ಹಾಸಿಗೆ ಕೋವಿಡ್ ಗೆ ಮೀಸಲು

ಧಾರವಾಡ prajakiran.com : ಕೋವಿಡ್-೧೯ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿರುವುದರಿಂದ ಸರ್ಕಾರಿ ಆಸ್ಪತ್ರೆಗಳು ಹಾಗೂ ಕಿಮ್ಸ್ ಜೊತೆಗೆ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಣಿಯಾಗಿರುವ ಖಾಸಗಿ ಆಸ್ಪತ್ರೆಗಳೂ ಕೂಡಾ ತಮ್ಮಲ್ಲಿರುವ ಒಟ್ಟು ಹಾಸಿಗೆಗಳ ಸಾಮರ್ಥ್ಯದ ಶೇ.೫೦ ರಷ್ಟು ಕೋವಿಡ್ ಚಿಕಿತ್ಸೆಗೆ ಮೀಸಲಿಡಲು ಒಪ್ಪಿಗೆ ನೀಡಿವೆ.  ಜಿಲ್ಲಾಡಳಿತ ಅಂತಹ ಆಸ್ಪತ್ರೆಗಳಿಗೆ ಅಗತ್ಯ ಸಹಕಾರ ನೀಡಲಿದೆ. ಇಂದಿನಿಂದಲೇ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಪ್ರಾರಂಭವಾಗಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಖಾಸಗಿ […]

ರಾಜ್ಯ

ಧಾರವಾಡದಲ್ಲಿ ೧೭ ಕೋವಿಡ್ ಆಸ್ಪತ್ರೆಗಳಿವೆ ಎಂದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಧಾರವಾಡ prajakiran.com  : ಧಾರವಾಡದಲ್ಲಿ ೧೭ ಕೋವಿಡ್ ಆಸ್ಪತ್ರೆಗಳಿವೆ. ಅದರಲ್ಲಿ ಚಿಕಿತ್ಸೆಗೆ ಬರುವ ರೋಗಿಗಳಿಗೆ ಚಿಕಿತ್ಸೆ ನೀಡಲಾಗುವುದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ,  ಕಿಮ್ಸ್ ಆಸ್ಪತ್ರೆಗಳಲ್ಲಿ ಸಾಕಷ್ಟು ವೈದ್ಯರು ಹಾಗೂ ಸ್ಟಾಫ್ ನರ್ಸ್ ಗಳು ಇರುವುದರಿಂದ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ನರ್ಸ್ ಗಳ ಕೊರತೆಯಿಲ್ಲ ಎಂದರು. ಜಿಲ್ಲೆಯಲ್ಲಿ ಕೊರೊನಾ ಚಿಕಿತ್ಸೆಗೆ ೬,೩೬೪ ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಕೇರ್‌ಸೆಂಟರ್‌ಗಳಿಗೆ ಈಗಾಗಲೇ ೫೦೦ ಬೆಡ್‌ಗಳನ್ನು ೫ ಆಯುರ್ವೇದ ಆಸ್ಪತ್ರೆಗಳನ್ನು ಗುರುತಿಸಿದೆ. ಕಿಮ್ಸ್ […]

ರಾಜ್ಯ

ಮದುವೆಗೆ ೫೦ ಕ್ಕೂ ಹೆಚ್ಚು ಜನ ಸೇರಿದರೆ ಕಾನೂನು ಕ್ರಮದ ಎಚ್ಚರಿಕೆ    

ಧಾರವಾಡ prajakiran.com:  ಜಲ್ಲೆಯ ಕೆಲವು ಮದುವೆ ಕಾರ್ಯಕ್ರಮಗಳಲ್ಲಿ ೫೦ ಜನ ಮಾತ್ರ ಇರುವ ನಿಯಮ ಮೀರಿ ಹೆಚ್ಚು ಜನ ಸೇರುತ್ತಿರುವುದು ಕಂಡು ಬರುತ್ತಿದೆ. ಹೀಗಾಗಿ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ  ಪ್ರಕರಣ ದಾಖಲಿಸಿ, ಕಠಿಣ ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಪಡೆ ಹಾಗೂ ತಹಸಿಲ್ದಾರಗಳ ಸಭೆ ಜರುಗಿಸಿ, ಮಾತನಾಡಿದರು. ಅತಿ ಜನ ಸೇರುವುದು, ಸಾಮಾಜಿಕ ಅಂತರ ಕಾಪಾಡದಿರುವುದು, ಸ್ಯಾನಿಟೈಸರ್, ಮಾಸ್ಕ್ ಬಳಸದಿರುವುದು ಕಂಡು […]

ರಾಜ್ಯ

ಧಾರವಾಡ 2, ಹುಬ್ಬಳ್ಳಿಯಲ್ಲಿ 30, ಕಲಘಟಗಿ 1, ನವಲಗುಂದ 2 ಸೇರಿ 38 ಜನರಿಗೆ ಕರೋನಾ

*ಒಟ್ಟು 465 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 216 ಜನ ಗುಣಮುಖ ಬಿಡುಗಡೆ* *241 ಸಕ್ರಿಯ ಪ್ರಕರಣಗಳು* *ಇದುವರೆಗೆ ಎಂಟು ಮರಣ*  ಧಾರವಾಡ  : ಜಿಲ್ಲೆಯಲ್ಲಿ ಶುಕ್ರವಾರ 38 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 465 ಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಈ ಪೈಕಿ ಇದುವರೆಗೆ 216  ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 241 ಪ್ರಕರಣಗಳು ಸಕ್ರಿಯವಾಗಿದ್ದರೆ ಎಂಟು ಜನ ಮೃತಪಟ್ಟಿದ್ದಾರೆ ಎಂದು ವಿವರಿಸಿದ್ದಾರೆ. ಸೋಂಕಿತರನ್ನು DWD […]

ರಾಜ್ಯ

ಧಾರವಾಡ ಜಿಲ್ಲಾಧಿಕಾರಿಯಾಗಿ ನಿತೇಶ್ ಪಾಟೀಲ ಅಧಿಕಾರ ಸ್ವೀಕಾರ

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ೨೦೧೨ ರ ಐಎಎಸ್ ಬ್ಯಾಚಿನ ನಿತೇಶ್ ಕಲ್ಲನಗೌಡ ಪಾಟೀಲ ಅವರು ಮಂಗಳವಾರ ನಿರ್ಗಮಿತ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರಿಂದ ಅಧಿಕಾರ ಸ್ವೀಕರಿಸಿದರು. ನಿತೇಶ್ ಪಾಟೀಲ ಅವರು ಮೂಲತ: ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ಕೆರೂಟಗಿ ಗ್ರಾಮದವರು. ಎಸ್‌ಎಸ್‌ಎಲ್‌ಸಿ ವರೆಗೆ ವಿಜಯಪುರದಲ್ಲಿ ವ್ಯಾಸಂಗ ಮಾಡಿದ್ದಾರೆ. ಬೆಂಗಳೂರಿನಲ್ಲಿ ಪಿಯುಸಿ, ಬಳಿಕ ಎನ್‌ಆಯ್‌ಟಿ ಅಲಹಾಬಾದ್‌ನಲ್ಲಿ ಬಿಇ (ಕಂಪ್ಯೂಟರ್ ಸೈನ್ಸ್) ಪದವಿ ಪಡೆದರು. ಕೆಲಕಾಲ ಸಾಫ್ಟವೇರ್ ಇಂಜಿನೀಯರ್ ಆಗಿ ಸೇವೆ ಸಲ್ಲಿಸಿದ […]

ಜಿಲ್ಲೆ

ಧಾರವಾಡ ಜಿಲ್ಲೆಯಾದ್ಯಂತ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ನಿರ್ಭಂಧಿತ ಪ್ರದೇಶ ಘೋಷಣೆ

ಧಾರವಾಡ prajakiran.com : ಜೂನ್ ೨೫ ರಿಂದ ಜುಲೈ ೪ ರವರೆಗೆ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷಾ ಸಮಯದಲ್ಲಿ ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ ಧಾರವಾಡ ಮಹಾನಗರ ವ್ಯಾಪ್ತಿಯನ್ನು ಹೊರತುಪಡಿಸಿ) ಇರುವ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ-೧೯೭೩ರ ಕಲಂ ೧೪೪ ರನ್ವಯ ನಿರ್ಭಂಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ. ಈ ಘೋಷಿತ ಆದೇಶವು ಜೂನ್ ೨೫ರಿಂದ ಜುಲೈ ೪ ರವರೆಗೆ ಪರೀಕ್ಷಾ […]

ರಾಜ್ಯ

ಮಹಾರಾಷ್ಟ್ರದಿಂದ ಬಂದವರಿಗೆ ಮಾತ್ರ ೭ ದಿನ ಸಾಂಸ್ಥಿಕ ಕ್ವಾರಂಟೈನ್

ಧಾರವಾಡ prajakiran.com  : ಸರಕಾರದ ಹೊಸ ನಿಯಮದಂತೆ ಮಹಾರಾಷ್ಟ್ರದಿಂದ ಬಂದವರಿಗೆ ಮಾತ್ರ ೭ ದಿನಗಳ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದರು. ಅವರು ಸೋಮವಾರ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಉಳಿದ ರಾಜ್ಯಗಳಿಂದ ಬರುವವರಿಗೆ ಹೊಮ್‌ಕ್ವಾರಂಟೈನ್ ಮಾಡಲಾಗುತ್ತಿದೆ. ರೋಗಲಕ್ಷಣ ಇರುವವರಿಗೆ ಮಾತ್ರ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದರು.   ಜಿಲ್ಲೆಯಲ್ಲಿ ಇಲ್ಲಿವರೆಗೆ ೨೧,೧೧೨ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ೧೨೧ ಕರೊನಾ ವೈರಸ್ ಪ್ರಕರಣಗಳು ಪತ್ತೆ ಆಗಿದ್ದು, ಇದರಲ್ಲಿ ೫೦ ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಎರಡು […]

ರಾಜ್ಯ

ಧಾರವಾಡದ ಮೊರಬ ಗ್ರಾಮ ಬಫರ್ ಜೋನ್    

ಧಾರವಾಡ : ಧಾರವಾಡದ DWD 71 –  ಪಿ-  6222 (59 ವರ್ಷ , ಪುರುಷ)  ಇವರು ನವಲಗುಂದ ತಾಲ್ಲೂಕಿನ ಮೊರಬ  ಗ್ರಾಮದ ನಿವಾಸಿಯಾಗಿದ್ದಾರೆ. ಇವರಿಗೆ ಕರೋನಾ ಸೋಂಕು  ದೃಢಪಟ್ಟ ಬೆನ್ನಲ್ಲೇ  ಧಾರವಾಡದ ಮೊರಬ ಗ್ರಾಮದ ಸೋಂಕಿತನ ಮನೆಯ ಸುತ್ತ 100 ಮೀಟರ್ ಸಂಪೂರ್ಣ ನಿಯಂತ್ರಿತ ವಲಯವೆಂದು ಘೋಷಿಸಿ  ಸಂಪೂರ್ಣ ಪ್ರದೇಶವನ್ನು ಸೀಲ್ ಡೌನ್ ಮಾಡಿ ಧಾರವಾಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸಂಪೂರ್ಣ ಮೊರಬ ಗ್ರಾಮವನ್ನು ಬಫರ್ ಜೋನ್ ಎಂದು ಘೋಷಿಸಿ ಕೋವಿಡ್ 19 ಸೋಂಕು ಹರಡದಂತೆ […]