ರಾಜ್ಯ

ಧಾರವಾಡ ಜಿಲ್ಲೆಗೆ 1100 ಕೋಟಿ ವೆಚ್ಚದಲ್ಲಿ ಮಲಪ್ರಭಾ ನದಿಯಿಂದ ಕುಡಿಯುವ ನೀರು ಸರಬರಾಜು

ಹುಬ್ಬಳ್ಳಿ prajakiran.com : ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಹಾಗೂ ರಾಜ್ಯ ಸರ್ಕಾರದ ಜಲಧಾರೆ ಯೋಜನೆಯಡಿ 1100 ಕೋಟಿ ವೆಚ್ಚದಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಮಲಪ್ರಭಾ ನದಿಯಿಂದ ಕುಡಿಯುವ ನೀರು ಸರಬರಾಜು ಮಾಡಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಕುಸುಗಲ್ ಗ್ರಾಮದಲ್ಲಿ ಆಯೋಜಿಸಲಾದ ಘನ ತ್ಯಾಜ್ಯ ವಿಲೇವಾರಿ ಘಟಕ, ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಭೂಮಿ ಪೂಜೆ, ಮುಕ್ತಿ ವನಸಹಾಯ ಕೇಂದ್ರ ಉದ್ಘಾಟನೆ ನೆರವೇರಿಸಿ ಹಾಗೂ ಕಸ ವಿಲೇವಾರಿ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೇಂದ್ರ ಸರ್ಕಾರ ಹರ್ ಘರ್ ಜಲ್ ಯೋಜನೆ ಮೂಲಕ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುವುದು. 24*7 ನೀರು ಲಭ್ಯವಾಗುವಂತೆ ಮಾಡಲಾಗುವುದು. ಸ್ವಚ್ಛ ಭಾರತ್ ಸ್ವಚ್ಛ ಗ್ರಾಮ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯತಿಗೆ ಸಾಕಷ್ಟು ಅನುದಾನ ಒದಗಿಸಲಾಗುತ್ತಿದೆ.

ಪ್ರತಿ ಮನೆಯಲ್ಲೂ ಕಸ ವಿಂಗಡಣೆ ಮಾಡಬೇಕು. ಹಸಿ‌ ಹಾಗೂ ಕಸ ಸಂಗ್ರಹಿಸಲು ಗ್ರಾಮ ಪಂಚಾಯತಿಯಿಂದಲೇ ಹಸಿರು ಮತ್ತು ನೀಲಿ ಬುಟ್ಟಿಗಳನ್ನು ಉಚಿತವಾಗಿ ನೀಡಲಾಗುತ್ತಿದೆ.

ಕುಸುಗಲ್ ಗ್ರಾಮದಲ್ಲಿ 20 ಲಕ್ಷ ಅನುದಾನದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡಲಾಗುತ್ತಿದೆ. ಘಟಕ ನಿರ್ಮಾಣಕ್ಕೆ 5 ಲಕ್ಷ ಹಣವನ್ನು ನರೇಗಾದಡಿ ಕೊಡಲಾಗಿದೆ.

ಧಾರವಾಡ ಜಿಲ್ಲೆಗೆ 60 ತ್ಯಾಜ್ಯ ವಿಲೇವಾರಿ ಘಟಕ ಮಂಜೂರು ಆಗಿವೆ. 20 ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಸ್ವಚ್ಚತೆ ಗಮನ ನೀಡದೆ ಇರುವುದರಿಂದ ಹಲವು ಕಾಯಿಲೆಗಳು ಸಾಂಕ್ರಾಮಿಕ ರೋಗಗಳು ಹರಡುತ್ತವೆ.

ರೋಗ ಬಂದಾಗ ಆಸ್ಪತ್ರೆಗಳಿಗೆ ಹಣ ವ್ಯಯಿಸುವ ಬದಲು ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದರು.
ಕುಸುಗಲ್ ಗ್ರಾಮಸ್ಥರು ನೀಡದ ಮನವಿ ಸ್ಪಂದಿಸಿದ ಕೇಂದ್ರ ಸಚಿವರು ಹುಬ್ಬಳ್ಳಿ ಬೈಪಾಸ್ ರಸ್ತೆಯಿಂದ ಕುಸುಗಲ್ ಗ್ರಾಮಕ್ಕೆ ಸರ್ವೀಸ್ ರೋಡ್ ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *