ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ ಜೂ.1ರಿಂದ 18ರವರೆಗೆ 124 ಮನೆಗಳು ಭಾಗಶಃ ಹಾನಿ

ಧಾರವಾಡ prajakiran.com : ಜಿಲ್ಲೆಯಲ್ಲಿ ಜೂನ್ 1 ರಿಂದ 18 ವರೆಗೆ ಮಳೆಯಿಂದ ಜಿಲ್ಲೆಯಲ್ಲಿ 124 ಮನೆಗಳು ಭಾಗಶಃ ಹಾನಿಯಾಗಿವೆ.

ಧಾರವಾಡ – 22, ಅಳ್ನಾವರ – 1, ಹುಬ್ಬಳ್ಳಿ – 14, ಹುಬ್ಬಳ್ಳಿ ನಗರ – 5, ಕಲಘಟಗಿ – 10, ಕುಂದಗೋಳ – 13, ಅಣ್ಣಿಗೇರಿ – 17, ನವಲಗುಂದ – 42 ಸೇರಿ ಜಿಲ್ಲೆಯ 8 ತಾಲೂಕಿನ ವಿವಿಧ ಗ್ರಾಮಗಳಲ್ಲಿ ಒಟ್ಟು 124 ಮನೆಗಳು ಭಾಗಶಃ ಹಾನಿಯಾಗಿವೆ

ಹಾಗೂ ನವಲಗುಂದದಲ್ಲಿ 03 ಜಾನುವಾರುಗಳ ಪ್ರಾಣ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

*ಮಹಾನಗರ ಪೊಲೀಸ್ ಆಯುಕ್ತ ಲಾಬೂರಾಮ್ ಅವರು ಮಾತನಾಡಿ*, ಅವಳಿನಗರ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶಗಳ ಮಾಹಿತಿ ನೀಡಿದಲ್ಲಿ, ಆಯಾ ಪೊಲೀಸ್ ಠಾಣೆಗಳ ಮುಖಾಂತರ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಸಾರ್ವಜನಿಕರ ಸುರಕ್ಷತೆಗೆ ಕ್ರಮವಹಿಸಲು ಸಾಧ್ಯವಾಗುತ್ತದೆ ಎಂದರು.

*ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವಾರ್ಹಕ ಅಧಿಕಾರಿ ಡಾ.ಬಿ.ಸುಶೀಲಾ ಅವರು ಮಾತನಾಡಿ*, ನೆರೆಹಾವಳಿ ಉಂಟಾಗಬಹುದಾದ ಗ್ರಾಮಗಳ ವ್ಯಾಪ್ತಿಯಲ್ಲಿ ಜನಜಾಗೃತಿ ಮೂಡಿಸಲಾಗಿದೆ. ಗ್ರಾಮ ವ್ಯಾಪ್ತಿಯ ಒಳಚರಂಡಿ, ನಾಲಾ, ಸ್ವಚ್ಚಗೊಳಿಸಲಾಗಿದೆ.

ಗ್ರಾಮ ಮಟ್ಟದಲ್ಲಿ ಸಮಿತಿ ರಚಿಸಿ, ಜನ-ಜಾನುವಾರು ಸುರಕ್ಷತೆಗೆ ಕ್ರಮಕೈಗೊಳ್ಳಲಾಗಿದೆ. ಗ್ರಾಮಗಳಲ್ಲಿರುವ ಕೆರೆ, ಹೊಂಡಗಳು ತುಂಬಿ ಹಾನಿ ಆಗದಂತೆ ಮುಂಜಾಗೃತೆ ವಹಿಸಲು ನಿಗಾ ತಂಡಗಳನ್ನು ರಚಿಸಲಾಗಿದ್ದು, ಯಾವುದೇ ಸಮಸ್ಯೆ ಉಂಟಾದಲ್ಲಿ ಕಂದಾಯ, ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ, ಜಂಟಿ ಕಾರ್ಯಚರಣೆ ಕೈಗೊಳ್ಳಲು ಎಲ್ಲ ಗ್ರಾಮ ಪಂಚಾಯತ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

*ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಮಾತನಾಡಿ*, ಎಲ್ಲ ಪೊಲೀಸ್ ಠಾಣೆಗಳಿಗೆ ನೆರೆ ಪರಿಹಾರ ಕಾರ್ಯಗಳಲ್ಲಿ ತಕ್ಷಣ ಭಾಗವಹಿಸಿ, ರಕ್ಷಣಾ ಕಾರ್ಯದಲ್ಲಿ ತೊಡಗಲು ತಿಳಿಸಲಾಗಿದೆ.

ಅಗ್ನಿಶಾಮಕ ಇಲಾಖೆ ಸಿಬ್ಬಂದಿಯೊಂದಿಗೆ ತಕ್ಷಣ ಸ್ಥಳಕ್ಕೆ ಆಗಮಿಸಿ, ಕಾರ್ಯಾಚರಣೆ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

*ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಉಪವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ.ಬಿ., ಅಪರ ಜಿಲ್ಲಾಧಿಕಾರಿ ಶಿವಾಂನಂದ ಕರಾಳೆ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ಬಿಜಾಪುರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜನೀಯರ ಎಸ್.ಬಿ.ಚೌಡನ್ನವರ ಮಾತನಾಡಿದರು.

ಸಭೆಯಲ್ಲಿ ಪ್ರೋಬೆಷನರಿ ಐಎಎಸ್ ಅಧಿಕಾರಿ ಮಾಧವ ಗಿತ್ತೆ, ತಹಶೀಲ್ದಾರರಾದ ಡಾ. ಸಂತೋಷ ಬಿರಾದಾರ, ಪ್ರಕಾಶ ಸಾಶಿ, ಶಶಿಧರ ಮಾಡ್ಯಾಳ, ಅಶೋಕ ಶಿಗ್ಗಾಂವಿ, ಕೊಟ್ರೇಶ ಗಾಳಿ, ನವೀನ ಹುಲ್ಲೂರ, ಅಮರೇಶ ಪಮ್ಮಾರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಅಭಿಯಂತರರು ಭಾಗವಹಿಸಿದ್ದ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *