ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 50,040 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 50,040 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,02,33,183ಕ್ಕೆ ಏರಿಕೆಯಾಗಿದೆ.
ಅಲ್ಲದೇ ನಿನ್ನೆ ದೇಶದಲ್ಲಿ 57,944 ಕೊರೋನಾ ಸೋಂಕಿತರು ಚೇತರಿಸಿಕೊಂಡಿದ್ದು, ಇದರೊಂದಿಗೆ ಚೇತರಿಸಿಕೊಂಡವರ ಸಂಖ್ಯೆ 2,92,51,029ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 5,86,403 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ ನಿನ್ನೆ ಒಂದೇ ದಿನ ದೇಶಾದ್ಯಂತ 1,258 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,94,493 ಕ್ಕೆ ಏರಿಕೆಯಾಗಿದೆ.