ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,27,510 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,27,510 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 2,81,75,044ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ನಿನ್ನೆ 2,55,287 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 2,59,47,629 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 18,95,520 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ ದೇಶಾದ್ಯಂತ 2,795 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ3,31,895ಕ್ಕೆ ಏರಿಕೆಯಾಗಿದೆ.