ರಾಜ್ಯ

ಧಾರವಾಡ ಜಿಲ್ಲೆಯಾದ್ಯಂತ ಮೇ 31ರಂದು ೧೪೪ ನೇ ಕಲಂ ಅಡಿ ನಿಷೇಧಾಜ್ಞೆ

ಧಾರವಾಡ prajakiran.com :  ಕರೊನಾ ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಭಾನುವಾರ ಮೇ.೩೧ ರಂದು ಜಿಲ್ಲೆಯಾದ್ಯಂತ ಸಿ ಆರ್ ಪಿ ಸಿ ೧೯೭೩ ರ ಕಲಂ ೧೪೪ ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ.

ಈ ಆದೇಶವು  ಮೇ ೩೦ ರ ಸಾಯಂಕಾಲ  ೭  ಗಂಟೆಯಿಂದ  ಜೂನ್ ೧ ರ ಬೆಳಿಗ್ಗೆ ೭  ಗಂಟೆಯವರೆಗೆ  ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಸಂತೆ, ಜಾತ್ರೆ, ಸಮಾವೇಶ, ಮೆರವಣಿಗೆ, ಸಮ್ಮೇಳನ , ಕ್ರೀಡಾ ಕೂಟ ಹಾಗೂ ಎಲ್ಲ ಚಟುವಟಿಕೆಗಳನ್ನು ನಿಷೇಧಿಸಲಾಗಿರುತ್ತದೆ. 

೫ ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು , ಮೆರವಣಿಗೆ , ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಕರ್ಫ್ಯೂ  ಅವಧಿಯಲ್ಲಿ ಸಾರ್ವಜನಿಕರು ತುರ್ತು ವೈದ್ಯಕೀಯ ಕಾರ್ಯ ಹೊರತು ಪಡಿಸಿ ಅನಗತ್ಯವಾಗಿ ತಿರುಗಾಡುವುದನ್ನು ನಿರ್ಬಂಧಿಸಿದೆ.

ಕರ್ಫ್ಯೂ ಅವಧಿಯಲ್ಲಿ ಜಿಲ್ಲೆಯಲ್ಲಿನ ಮದುವೆ ಕಾರ್ಯಕ್ರಮದಲ್ಲಿ ಕೇವಲ ೫೦ ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ. ಶವ ಸಂಸ್ಕಾರ ಕಾರ್ಯದಲ್ಲಿ ಕೇವಲ ೨೦ ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ.

ಸರಕಾರಿ ವಾಹನಗಳಿಗೆ ಮತ್ತು ಕೋವಿಡ್ -೧೯ ಕಾರ್ಯಾಚರಣೆಯಲ್ಲಿ ಕರ್ತವ್ಯನಿರತ ಸಿಬ್ಬಂದಿ ಮತ್ತು ವಾಹನಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ .ಈ ಅವಧಿಯಲ್ಲಿ ಕಿರಾಣಿ ಅಂಗಡಿಗಳು, ತರಕಾರಿ ಅಂಗಡಿಗಳು, ಹಾಲು ಮೊಸರು, ಚಿಕನ್, ಮಟನ್ ಹಾಗೂ ಇತರೆ ಅವಶ್ಯಕ ವಸ್ತುಗಳ ಸೇವೆಗಳು ಲಭ್ಯವಿರುತ್ತವೆ.

ಹೋಟೆಲ್ ಗಳು  ಪಾರ್ಸೆಲ್ ಸೇವೆ ಮಾತ್ರ ನೀಡಬಹುದು. ಹುಬ್ಬಳ್ಳಿ ರೈಲು ನಿಲ್ದಾಣದಿಂದ ಪಶ್ಚಿಮ ಬಂಗಾಳಕ್ಕೆ ವಲಸೆ ಕಾರ್ಮಿಕರಿಗೆ ರೈಲು ನಿಯೋಜಿತವಾಗಿರುವದರಿಂದ ಅಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಮತ್ತು ಪ್ರಯಾಣ ಮಾಡಲು ಆಗಮಿಸುವ ವಲಸೆ ಕಾರ್ಮಿಕರಿಗೆ ಹಾಗೂ ವಲಸೆ ಕಾರ್ಮಿಕರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುವಂತಹ ವ್ಯಕ್ತಿಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ

ಈ ಆದೇಶ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ ೧೮೮ ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು  ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *