dharwad dc order
ಜಿಲ್ಲೆ

ಧಾರವಾಡ ಜಿಲ್ಲೆಯಾದ್ಯಂತ ಜೂನ್ 7ರವರೆಗೆ 144 ನೇ ಕಲಂ ನಿಷೇಧಾಜ್ಞೆ ಜಾರಿ

ಧಾರವಾಡ prajakiran.com : ಕೋವಿಡ್ ನಿಯಂತ್ರಣಕ್ಕಾಗಿ, ಜಿಲ್ಲೆಯಾದ್ಯಂತ ಜೂನ್ 7 ರವರೆಗೆ ಕಠಿಣ ಲಾಕ್‌ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಜನ ಸೇರುವುದನ್ನು ನಿರ್ಬಂಧಿಸಲು 1973ರ ಸಿಆರ್‌ಪಿಸಿ ಕಲಂ 144(1) ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.

ವಿನಾಯಿತಿ ನೀಡಲಾದ ಅಗತ್ಯ ಸೇವೆ ಮತ್ತು ಚಟುವಟಿಕೆಗಳು ಹಾಗೂ ಬಸ್,ರೈಲು ಮತ್ತು ನಿಲ್ದಾಣಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ.

ಕೋವಿಡ್ ಶಿಷ್ಟಾಚಾರ ಪಾಲನೆ ಕಡ್ಡಾಯವಾಗಿದೆ.

ಈ ಆದೇಶವು ಜೂನ್‌ 7 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಇದನ್ನು ಉಲ್ಲಂಘಿಸುವವರ ವಿರುದ್ಧ 2005 ರ ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 51 ರಿಂದ 60 , ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188 ಹಾಗೂ 2020 ರ ಕರ್ನಾಟಕ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *