ರಾಜ್ಯ

ಧಾರವಾಡ ಜಿಲ್ಲೆಯ ೧,೫೦೦ ಜನರ ಕರೋನಾ ವರದಿ ನಿರೀಕ್ಷೆ

ಧಾರವಾಡ prajakiran.com : ಜಿಲ್ಲೆಯಲ್ಲಿ ಇದುವರೆಗೆ ಸುಮಾರು ೧೪ ಸಾವಿರ ಜನರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ. ಇವರಲ್ಲಿ ಸುಮಾರು ೧೨,೫೦೦ ಜನರ ವರದಿ ನೆಗೆಟಿವ್ ಬಂದಿರುವುದು ಸಮಾಧಾನದ ಸಂಗತಿಯಾಗಿದೆ.

ಇನ್ನೂ ೧,೫೦೦ ಜನರ ವರದಿ ನಿರೀಕ್ಷಿಸಲಾಗುತ್ತಿದೆ. ಪ್ರಯೋಗಾಲಯ ವರದಿಗಳು ಹೆಚ್ಚು ವಿಳಂಬವಾಗದಂತೆ ಎಚ್ಚರ ವಹಿಸಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿರುವ ಗೌರವ್ ಗುಪ್ತ ಹೇಳಿದರು.

ಪಾಸಿಟಿವ್ ವ್ಯಕ್ತಿಗಳ ಚಿಕಿತ್ಸೆಗೆ ಜಿಲ್ಲೆಯಲ್ಲಿ ಇದುವರೆಗೆ ವೆಂಟಿಲೆಟರ್‌ಗಳ ಬಳಕೆಯ ಅಗತ್ಯ ಕಂಡುಬಂದಿಲ್ಲವಾದರೂ ಎಲ್ಲ ಪೂರಕ ಸಿದ್ಧತೆಗಳು ಸದಾಕಾಲ ಅಣಿಯಾಗಿರಬೇಕು.

ಜಿಲ್ಲೆಯಲ್ಲಿ ೯ ಫೀವರ್ ಕ್ಲಿನಿಕ್‌ಗಳು ಇದ್ದರೂ ಕಿಮ್ಸ್ ಮತ್ತು ಧಾರವಾಡ ಜಿಲ್ಲಾಸ್ಪತ್ರೆಗೆ ಹೆಚ್ಚು ಸಂಖ್ಯೆಯ ಜನರು ತಪಾಸಣೆಗೆ ಬರುತ್ತಿದ್ದಾರೆ.

ಉಳಿದಂತೆ ಎಸ್‌ಡಿಎಂ ಆಸ್ಪತ್ರೆ, ಮಾದರಮಡ್ಡಿ, ಬಾರಾಕೊಟ್ರಿ, ಪುರೋಹಿತನಗರ, ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆ, ರೈಲ್ವೆ ಆಸ್ಪತ್ರೆಗಳಲ್ಲಿ ಇರುವ ಫಿವರ್ ಕ್ಲಿನಿಕ್‌ಗಳಿಗೂ ಜನರು ಹೋಗುವಂತೆ ಮಾರ್ಗದರ್ಶನ ಮಾಡಬೇಕು.

ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಗುರುತಿಸಲಾಗಿರುವ ೭ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಲಭ್ಯವಿರುವ ಸೌಲಭ್ಯಗಳು ಮತ್ತು ಅರೆವೈದ್ಯಕೀಯ ಮಾನವ ಸಂಪನ್ಮೂಲಗಳ ಕುರಿತು ಮಾಹಿತಿ ಪಡೆದ ಉಸ್ತುವಾರಿ ಕಾರ್ಯದರ್ಶಿಗಳು ಸಮರ್ಪಕ ನಿರ್ವಹಣೆಗೆ ಸೂಚಿಸಿದರು.

ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ ೪೩ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.

ಅವುಗಳಲ್ಲಿ ಪ್ರಯಾಣದ ಹಿನ್ನೆಲೆಯಿಂದ ೨೮, ಸೋಂಕಿತರ ಸಂಪರ್ಕದಿಂದ ೧೨, ಹಾಗೂ ನೆಗಡಿ, ಕೆಮ್ಮು ಮತ್ತು ತೀವ್ರ ಜ್ವರದ ಲಕ್ಷಣದಿಂದ ೩ ಜನರಲ್ಲಿ ಪಾಸಿಟಿವ್ ದೃಢಪಟ್ಟಿದೆ.

ಈಗಾಗಲೇ ೧೧ ಜನ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ೩೨ ಸಕ್ರಿಯ ಪ್ರಕರಣಗಳು ಇವೆ. ಜಿಲ್ಲೆಯಲ್ಲಿ ೨೧ ಕ್ವಾರಂಟೈನ್ ಸೌಲಭ್ಯ ಕೇಂದ್ರಗಳನ್ನು ಗುರುತಿಸಲಾಗಿದೆ.

 ಜಿಲ್ಲೆಯಲ್ಲಿ ಈವರೆಗೆ ೯ ಪ್ರದೇಶಗಳನ್ನು ಸೀಲ್‌ಡೌನ್ ಮಾಡಲಾಗಿತ್ತು. ಅವುಗಳಲ್ಲಿ ಈಗಾಗಲೇ ೩ ಪ್ರದೇಶಗಳನ್ನು ಮುಕ್ತಗೊಳಿಸಲಾಗಿದೆ.

ಸದ್ಯ ೬ ಪ್ರದೇಶಗಳು ಸೀಲ್‌ಡೌನ್ ವ್ಯಾಪ್ತಿಯಲ್ಲಿವೆ. ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ನಡೆಸುವ ಕಾರ್ಯದಲ್ಲಿ ಶೇ. ೯೯.೯೪ ಪ್ರಗತಿ ಸಾಧಿಸಲಾಗಿದೆ.

ಕಂಟೈನ್‌ಮೆಂಟ್ ವಲಯದ ಆರೋಗ್ಯ ಸಮೀಕ್ಷೆಯಲ್ಲಿ ೧೧೧.೧೯ ಪ್ರಗತಿ ಸಾಧಿಸಲಾಗಿದೆ ಎಂದರು.

ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ: ಹೊರರಾಜ್ಯಗಳಿಂದ ಆಗಮಿಸಿದ ಜನರನ್ನು ಪ್ರತ್ಯೇಕವಾಗಿ ಸಾಂಸ್ಥಿಕ ಮತ್ತು ಹೋಟೆಲ್ ಕ್ವಾರಂಟೈನ್ ಮಾಡಲಾಗಿರುವ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಗೌರವ್ ಗುಪ್ತ ಭೇಟಿ ನೀಡಿದರು.

ಕ್ವಾರಂಟೈನ್‌ನಲ್ಲಿರುವ ಜನರೊಂದಿಗೆ ಮಾತುಕತೆ ನಡೆಸಿದ ಅವರು ಅಲ್ಲಿ ದೊರೆಯುತ್ತಿರುವ ಸೌಲಭ್ಯಗಳು, ಲಾಕ್‌ಡೌನ್ ಕಾರಣದಿಂದ ಎದುರಾಗಿರುವ ಅವರ ವೃತ್ತಿಸಂಬಂಧಿ ಸವಾಲುಗಳು, ಮುಂಬರುವ ದಿನಗಳಲ್ಲಿ ಜೀವನ ನಿರ್ವಹಣೆಗೆ ಹಾಕಿಕೊಂಡಿರುವ ಯೋಜನೆಗಳ ಕುರಿತು ಮಾಹಿತಿ ಪಡೆದರು.

ಸರ್ಕಾರದಿಂದ ಗ್ರಾಮೀಣ ಭಾಗದ ಜನರಿಗೆ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ದೊರೆಯುವ ಸೌಕರ್ಯಗಳ ಸದುಪಯೋಗ ಪಡೆಯಲು ಸಲಹೆ ನೀಡಿದರು.

ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ಥಾಪಿಸಲಾಗಿರುವ ಹೊರರಾಜ್ಯದಿಂದ ಆಗಮಿಸುವ ಜನರ ನೋಂದಣಿ ಮತ್ತು ತಪಾಸಣೆ ಕೇಂದ್ರ, ಸ್ವಂತ ವೆಚ್ಚದಲ್ಲಿ ಹೋಟೆಲ್ ಕ್ವಾರಂಟೈನ್ ಸೌಲಭ್ಯ ಪಡೆದಿರುವ ಸ್ಥಳಗಳಿಗೆ ಭೇಟಿ ನೀಡಿ ಅಲ್ಲಿನ ಜನರಿಂದ ಮಾಹಿತಿ ಪಡೆದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *