ಬೆಂಗಳೂರು prajakiran.com : ರಾಜ್ಯದಲ್ಲಿಯೂ ಕೊರೋನಾ ಸೋಂಕಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 1,564 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ 1,564 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ.
4,775 ಕೊರೋನಾ ಸೋಂಕಿತರು ಚೇತರಿಸಿಕೊಂಡಿದ್ದು, ಚೇತರಿಸಿಕೊಂಡವರ 27,73,407ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 44,846 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ ರಾಜ್ಯಾದ್ಯಂತ 59 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 35,367 ಕ್ಕೆ ಏರಿಕೆಯಾಗಿದೆ.