ಬೆಂಗಳೂರು prajakiran.com : ಮಾಜಿ ಸಚಿವ ರಮೇಶ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ
ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಎದುರು ಖುದ್ದಾಗಿ ಹೇಳಿಕೆ ನೀಡಿದ್ದಾಳೆ.
ಆಕೆಯ ಸುರಕ್ಷತೆ ದೃಷ್ಟಿಯಿಂದ ಹಾಗೂ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ನ್ಯಾಯಾಧೀಶರು ವಸಂತನಗರದಲ್ಲಿರುವ ವಿಶೇಷ ಕೋರ್ಟ್ ನಲ್ಲಿ ಆಕೆಗೆ ಸಲಹೆ, ಧೈರ್ಯ ನೀಡಿ, ಪ್ರಮಾಣ ವಚನ ಬೋಧಿಸಿ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ.
28 ದಿನಗಳ ನಂತರ ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ ಹಾಜರಾಗಿ, ನ್ಯಾಯಾಲಯಕ್ಕೆ ತನ್ನ
ಹೇಳಿಕೆಯನ್ನು ದಾಖಲಿಸಲು ಅವಕಾಶ ನೀಡಬೇಕು ಎಂದು ಯುವತಿ ಪರ ವಕೀಲ ಜಗದೀಶ್ ಮನವಿ ಮಾಡಿದ್ದರು.
ಎಸ್ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲು ಯುವತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಯುವತಿ ನ್ಯಾಯಾಲಯಕ್ಕೆ ಹಾಜರಾಗಲು ನ್ಯಾಯಾಧೀಶರು ಸಮ್ಮತಿ ನೀಡಿದ್ದರು.
ನ್ಯಾಯಾಧೀಶರ ಮುಂದೆ ತನ್ನ ಹೇಳಿಕೆಯನ್ನು ದಾಖಲಿಸಲಿದ್ದಾಳೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ನ್ಯಾಯಾಲಯ ಆವರಣದಲ್ಲಿ
ಬಿಗಿ ಭದ್ರತೆಯನ್ನು ಒದಗಿಸಿದ್ದಾರೆ.