ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 1,73,790 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,73,790 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,77,29,247 ಕ್ಕೆ ಏರಿಕೆಯಾಗಿದೆ.
ನಿನ್ನೆ ದೇಶದಲ್ಲಿ 2,84,601 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 2,51,78,011 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 22,28,724 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಒಂದೇ ದಿನ ದೇಶಾದ್ಯಂತ 3,617 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.