ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಗುರುವಾರ ಬರೋಬ್ಬರಿ 176 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಗುರುವಾರ ಸಂಜೆ ಮತ್ತೆ ಹೊಸದಾಗಿ 176 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ.

 ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1574 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. 

ಧಾರವಾಡ ಜಿಲ್ಲೆಯಲ್ಲಿ ಗುರುವಾರ   ಯಾರೊಬ್ಬರು  ಸಾವನ್ನಪ್ಪದಿರುವುದು ಸ್ವಲ್ಪ ಸಮಾಧಾನದ ಸಂಗತಿಯಾಗಿದೆ. 

ಗುರುವಾರ 42 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ 524 ಜನ ಬಿಡುಗಡೆಯಾಗಿದ್ದಾರೆ.

ಇನ್ನೂ 1006 ಸಕ್ರಿಯ ಕರೋನಾ ಸೋಂಕಿತರು ಜಿಲ್ಲೆಯಲ್ಲಿದ್ದಾರೆ  ಎಂದು ವಿವರಿಸಿದೆ. ಅಲ್ಲದೆ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ 44 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಇದಲ್ಲದೆ, ಇನ್ನೂ 25  ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *