ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಎರಡನೇ ಅಲೆ ತಗ್ಗಿದ್ದು, ಕಳೆದ 24 ಗಂಟೆಯಲ್ಲಿ 1,86,364 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,86,364 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2,75,55,457ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಗುರುವಾರ 2,59,459 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 2,48,93,410 ಕ್ಕೆ ಏರಿಕೆಯಾಗಿದೆ.
ಪ್ರಸ್ತುತ ದೇಶದಲ್ಲಿ 23,43,152
ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ನಿನ್ನೆ ಒಂದೇ ದಿನ ದೇಶಾದ್ಯಂತ 3,660 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,18,895 ಕ್ಕೆ ಏರಿಕೆಯಾಗಿದೆ.