ರಾಜ್ಯ

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ : ಆಯೋಗದ ವರದಿ ನಂತರ ಕ್ರಮ ಎಂದ ಸಿಎಂ

ಬೆಳಗಾವಿ prajakiran.com ಡಿ. 16: ಹಿಂದುಳಿದ ವರ್ಗಗಳ ಆಯೋಗವು ವರದಿ ನೀಡಿದ ನಂತರ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೂಡಲಸಂಗಮ ಕ್ಷೇತ್ರದ ಲಿಂಗಾಯತ ಪಂಚಮಸಾಲಿ ಜಗದ್ಗುರುಗಳು ಹಾಗೂ ಸಮಾಜದ ಶಾಸಕರೊಂದಿಗೆ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲಾಗಿದೆ.

ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ ಸಂವಿಧಾನಾತ್ಮಕವಾಗಿ ಪರಿಶೀಲಿಸಲಾಗುವುದು.

ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಬಗ್ಗೆ ಶಿಫಾರಸ್ಸು ಮಾಡಲಾಗಿದೆ. ವರದಿ ಬಂದ ಕೂಡಲೇ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಲಾಗುವುದು.

ಚುನಾವಣೆ ನೀತಿ ಸಂಹಿತೆ ಇದ್ದುದರಿಂದ ಎಲ್ಲೆಡೆಯಿಂದ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *