ನವದೆಹಲಿ prajakiran.com : ಕಳೆದ 24 ಗಂಟೆಗಳಲ್ಲಿ 2,11,298 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, 3,847 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಇಲಾಖೆಯ ವರದಿ ಪ್ರಕಾರ, ನಿನ್ನೆ ದೇಶದಲ್ಲಿ 2,11,298 ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,73,69,093ಕ್ಕೆ ಏರಿಕೆಯಾಗಿದೆ.
24,19,907 ಮಂದಿ ಸಕ್ರಿಯ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬುಧವಾರ ಒಂದೇ ದಿನ 2,83,135 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2,46,33,951ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಇದುವರೆಗು 3,15,235 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.