ಸ್ಥರ ಕಾಯ್ದುಕೊಂಡ ಸಾವಿನ ಸಂಖ್ಯೆ, ಸೋಂಕಿತರ ಸಂಖ್ಯೆ ಎಷ್ಟು ?
ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 80,834 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 80,834 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ 2,94,39,989ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 1,32,062 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಇದರೊಂದಿಗೆ ಚೇತರಿಸಿಕೊಂಡವರ ಸಂಖ್ಯೆ 2,80,43,446ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 10,26,159 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 3,303 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,70,384 ಕ್ಕೆ ಏರಿಕೆಯಾಗಿದೆ.