ದೇಶದಲ್ಲಿ 62,224 ಹೊಸ ಪ್ರಕರಣಗಳು ಪತ್ತೆ,
ನವದೆಹಲಿ prajakiran.com : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 62,224 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ.
ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 62,224 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,96,33,105ಕ್ಕೆ ಏರಿಕೆಯಾಗಿದೆ.
ನಿನ್ನೆ ದೇಶದಲ್ಲಿ 1,07,628 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 2,83,88,100 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 8,65,432 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಒಂದೇ ದಿನ ದೇಶಾದ್ಯಂತ 2542 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,79,573ಕ್ಕೆ ಏರಿಕೆಯಾಗಿದೆ.