ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಇನ್ನೂ ೨೫೦ ಜನರ ವರದಿ ಬಾಕಿ   

ಧಾರವಾಡ prajakiran.com : ಕಳೆದ ಒಂದು ವಾರದಿಂದ ಧಾರವಾಡ ಜಿಲ್ಲೆಯಲ್ಲಿ ಕರೋನಾ ಅಟ್ಟಹಾಸ ಮುಂದುವರೆದ ಬೆನ್ನಹಿಂದೆಯೇ ಇನ್ನೂ ೨೫೦ ಜನರ ವರದಿ ಬಾಕಿಯಿರುವುದು ಜಿಲ್ಲೆಯ ಜನತೆಯನ್ನು ಮತ್ತಷ್ಟು ಆತಂಕ ಸೃಷ್ಟಿಸಿದೆ.

ಧಾರವಾಡ ಜಿಲ್ಲೆಯಲ್ಲಿ ಇದುವರೆಗೆ ೨೧,೪೬೩ ಜನರ ಗಂಟಲು ದ್ರವ ತಪಾಸಣೆ ಮಾಡಲಾಗಿದೆ. ೨೧,೧೦೦ ಜನರ ವರದಿಗಳು ನೆಗೆಟಿವ್ ಬಂದಿವೆ ಎಂದು ಧಾರವಾಡ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸುಜಾತಾ ಹಸವೀಮಠ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 171 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ೫೧ ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 117 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *