*ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ, ಸಾವಿನ ಸಂಖ್ಯೆ 4,106 ಕ್ಕೆ ಏರಿಕೆ*
ನವದೆಹೆಲಿ Prajakiran.com : ಕಳೆದ 24 ಗಂಟೆಯಲ್ಲಿ 2,81,386 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ವರದಿ ಪ್ರಕಾರ, ನಿನ್ನೆ 2,81,386 ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,49,65,463ಕ್ಕೆ ಏರಿಕೆಯಾಗಿದೆ.
ಸೋಂಕಿತರ ಪೈಕಿ 35,16,997 ಮಂದಿ ಸಕ್ರಿಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ ಭಾನುವಾರ 3,78,741 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2,11,74,076ಕ್ಕೆ ಏರಿಕೆಯಾಗಿದೆ.
ನಿನ್ನೆ ಒಂದೇ ದಿನ 4,106 ಮಂದಿ ಸೋಂಕಿಗೆ ಬಲಿಯಾಗಿದ್ದು, ಈವರೆಗೂ 2,74,390 ಮಂದಿ ಮೃತಪಟ್ಟಿದ್ದಾರೆ.