ಅಂತಾರಾಷ್ಟ್ರೀಯ

ಕೊರೋನಾ ಪ್ರಕರಣ : ಒಂದೇ ದಿನದಲ್ಲಿ 3,876 ಮಂದಿ ಸಾವು…..!

ನವದೆಹೆಲಿ prajakiran.com : ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇತ್ತು.

ಇದೀಗ ರಾಜ್ಯಗಳ ಲಾಕ್‌ಡೌನ್ ಅಸ್ತ್ರ ಯಶಸ್ವಿಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದ್ದು, 3,29,942 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,29,942 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 2,29,92,517ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 3,56,082 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 1,90,27,304 ಕ್ಕೆ ಏರಿಕೆಯಾಗಿದೆ.

ಪ್ರಸ್ತುತ ದೇಶದಲ್ಲಿ 37,15,221 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ ದೇಶಾದ್ಯಂತ 3,876 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,49,992 ಕ್ಕೆ ಏರಿಕೆಯಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *