ಶಿವಮೊಗ್ಗ prajakiran.com : ಶಿವಮೊಗ್ಗದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಲ್ಕು ದಿನಗಳ ಕಾಲ ಸಂಪೂರ್ಣ ಕಟ್ಟುನಿಟ್ಟಿನ ಲಾಕ್ ಡೌನ್ಗೆ ಘೋಷಿಸಲಾಗಿದೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಮೇ 13 ರಿಂದ 16 ರವೆಗೆ ಶಿವಮೊಗ್ಗ ನಗರಕ್ಕೆ ಸೀಮಿತವಾಗಿ ಲಾಕ್ ಡೌನ್ ಮಾಡಲಾಗುತ್ತಿದೆ.
ಸ್ಥಳೀಯ ಏರಿಯಾವನ್ನು ಬಿಟ್ಟು ಯಾರು ಹೊರಬರುವಂತಿಲ್ಲ .
ದಿನಸಿ ಸೇರಿದಂತೆ ಏನೇ ಅಗತ್ಯ ವಸ್ತು ಬೇಕಾದರೂ ನಾಳೆಯೇ ಖರೀದಿ ಮಾಡಿಟ್ಟುಕೊಳ್ಳಿ ಎಂದು ಸೂಚಿಸಿದ್ದಾರೆ.