ರಾಜ್ಯ

ಹಳೆ ಹುಬ್ಬಳ್ಳಿ ಗಲಭೆ : 40 ಕ್ಕೂ ಹೆಚ್ಚು ಜನರ ಬಂಧನ

ಹುಬ್ಬಳ್ಳಿ prajakiran.com : ನಿನ್ನೆ ರಾತ್ರಿ ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರು ಎಲ್ಲ ಮಾಹಿತಿಗಳನ್ನು ಕಲೆ ಹಾಕಿದ್ದು, ೪೦ ಕ್ಕೂ ಹೆಚ್ಚು ಜನರನ್ನು ಬಂಧನ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಸಿಟಿವಿ ಕ್ಯಾಮರಾವನ್ನಾಧರಿಸಿ ಯಾರು ತಪ್ಪು ಮಾಡಿದ್ದಾರೆ, ಅವರ ಮೇಲೆ ಸೂಕ್ತ ಕ್ರಮ ಜರುಗಿಸುವುದಾಗಿ ಹೇಳಿದರು.

ಸದ್ಯ ಬಂಧನಕ್ಕೋಳಗಾದವರನ್ನು ಮ್ಯಾಜಿಸ್ಟ್ರೇಟ್ ಎದುರು ಹಾಜರು ಪಡಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಪಕ್ಕದ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಸೇರಿದಂತೆ ವಿವಿಧೆಡೆ ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *