ನವದೆಹೆಲಿ prajakiran.com : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,43,144 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ದೇಶಾದ್ಯಂತ 4,000 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,43,144 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,40,46,809 ರಷ್ಟು ಏರಿಕೆಯಾಗಿದೆ.
ಗುರುವಾರ ದೇಶದಲ್ಲಿ 3,44,776 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 2,00,79,599ಕ್ಕೆ ಏರಿಕೆಯಾಗಿದೆ.
ಪ್ರಸ್ತುತ ದೇಶದಲ್ಲಿ 37,04,893 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗುರುವಾರ ದೇಶಾದ್ಯಂತ 4,000 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,62,317 ಕ್ಕೆ ಏರಿಕೆಯಾಗಿದೆ.