*ನಿನ್ನೆ ದೇಶದಲ್ಲಿ 41,506 ಸೋಂಕಿತರು ಪತ್ತೆ, ಸಾವಿನ ಸಂಖ್ಯೆ ಎಷ್ಟು?*
ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 41,506 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 41,506 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಇನ್ನೂ ನಿನ್ನೆ 41,526 ಜನ ಚೇತಸಿಕೊಂಡಿದ್ದಾರೆ. ಇದರೊಂದಿಗೆ ಚೇತರಿಸಿಕೊಂಡವರ ಸಂಖ್ಯೆ 2,99,75,064ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 4,54,118 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಒಂದೇ ದಿನ ದೇಶಾದ್ಯಂತ 895 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,08,040 ಕ್ಕೆ ಏರಿಕೆಯಾಗಿದೆ.