ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಎರಡನೇ ಅಲೆಯಿಂದ ಕೊಂಚ ಮಟ್ಟಿಗೆ ಭಾರತ ಚೇತರಿಸಿಕೊಳ್ಳುತ್ತಿದೆ ಎನ್ನಬಹುದು.
ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 43,071 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 43,071 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,05,45,433ಕ್ಕೆ ಏರಿಕೆಯಾಗಿದೆ.
ನಿನ್ನೆ ದೇಶದಲ್ಲಿ 52,299 ಕೊರೋನಾ ಸೋಂಕಿತರು ಚೇತರಿಸಿಕೊಂಡಿದ್ದು, ಚೇರತಿಸಿಕೊಂಡವರ ಸಂಖ್ಯೆ 2,96,58,078ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 4,85,350 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ದೇಶಾದ್ಯಂತ 955 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,02,005 ಕ್ಕೆ ಏರಿಕೆಯಾಗಿದೆ.