ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿರುವುದು ಸಮಾಧಾನದ ಸಂಗತಿಯಾಗಿದೆ.
ಹುಬ್ಬಳ್ಳಿಯ ಕಿಮ್ಸ್ ನಿಂದ ಮಂಗಳವಾರ ಐವರನ್ನ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.
ಗುಣಮುಖರಾದವರನ್ನು ಪಿ- 2181 ( 33 ವರ್ಷದ ಪುರುಷ) , ಪಿ-3397 ( 47 ವರ್ಷದ ಪುರುಷ) , ಪಿ-3398 ( 25 ವರ್ಷದ ಪುರುಷ) , ಪಿ- 3436 ( 48 ವರ್ಷದ ಪುರುಷ) ಹಾಗೂ ಪಿ-3437 ( 66 ವರ್ಷದ ಮಹಿಳೆ) ಸಂಪೂರ್ಣ ಗುಣಮುಖರಾಗಿದ್ದಾರೆ.
ಆ ಮೂಲಕ ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ೬೬ ಕ್ಕೆ ಏರಿಕೆಯಾಗಿದೆ. ಈ ಪೈಕಿ ಈಗಾಗಲೇ 44 ಜನ ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನುಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ವಿವರಿಸಿದ್ದಾರೆ.