ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ 5 ಸಾವು, 174 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಮತ್ತೆ ಹೊಸದಾಗಿ 174  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ.

ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2842 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. 

ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರವು  5 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  85 ಕ್ಕೆ ಏರಿದಂತಾಗಿದೆ.  

ಶುಕ್ರವಾರ ಜಿಲ್ಲೆಯಲ್ಲಿ  52 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 973 ಜನರು ಬಿಡುಗಡೆಗೊಂಡತಾಗಿದೆ. ಇನ್ನೂ 1784 ಸಕ್ರಿಯ ಕರೋನಾ ಸೋಂಕಿತರು ಜಿಲ್ಲೆಯಲ್ಲಿದ್ದಾರೆ  ಎಂದು ವಿವರಿಸಿದೆ.

 ಇದಲ್ಲದೆ, ಇನ್ನೂ23 ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಲಾಗಿದೆ.

ಸಾವನ್ನಪ್ಪಿದ್ದವರ ವಿವರ :  ಪಿ-30754 ಸೋಂಕಿತ 65 ವರ್ಷದ ವೃದ್ದ,  ಪಿ-31781 ಸೋಂಕಿತ  51 ವರ್ಷದ ಮಹಿಳೆ, ಪಿ-47436-ಸೋಂಕಿತ 46 ವರ್ಷದ ಮಹಿಳೆ, ಪಿ-48736-ಸೋಂಕಿತ 63 ವರ್ಷದ ವೃದ್ದೆ, ಪಿ-64750-ಸೋಂಕಿತ 83 ವರ್ಷದ ವೃದ್ದೆ ( ಸಾರಿ  ಕೇಸ್ ) ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು.

 ಐವರು ಚಿಕಿತ್ಸೆ ಫಲಿಸದೆ ಜಿಲ್ಲೆಯ ವಿವಿಧ ನಿಯೋಜಿತ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ತ್ ಬುಲೇಟಿನ್ ವಿವರಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *