ರಾಜ್ಯ

ರಾಜ್ಯದಲ್ಲಿ ಶುಕ್ರವಾರ ಕರೋನಾಕ್ಕೆ 57 ಸಾವು, 2313  ಪ್ರಕರಣ ಪತ್ತೆ




ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 57 ಜನ ಸಾವನ್ನಪ್ಪಿದ್ದಾರೆ.

ಮತ್ತೆ ಹೊಸದಾಗಿ 2313 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ        33418 ಕ್ಕೆ ಏರಿಕೆಯಾಗಿದೆ.

 ಇಂದು ರಾಜ್ಯದಲ್ಲಿ   1003 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  13836   ಜನ ಗುಣಮುಖರಾಗಿದ್ದು,    19035  ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 472   ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.



ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಶುಕ್ರವಾರ  57 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ   543 ಕ್ಕೆ ಏರಿಕೆಯಾದಂತಾಗಿದೆ.

ಶುಕ್ರವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೇ  1148 ಜನ ಸೋಂಕಿತರಿದ್ದರೆ ಇಂದು ಬರೋಬ್ಬರಿ  1447 ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.



 ಇನ್ನೂಳಿದಂತೆ  ದಕ್ಷಿಣ ಕನ್ನಡ 139,  ವಿಜಯಪುರ 89, ಬಳ್ಳಾರಿ 66, ಕಲಬುರಗಿ 58, ಯಾದಗಿರಿ ಹಾಗೂ ಮೈಸೂರು ತಲಾ 51, ಧಾರವಾಡ 50, ಹಾವೇರಿ 42, ಉಡುಪಿ 34, ಉತ್ತರಕನ್ನಡ ಹಾಗೂ ಕೊಡಗು ತಲಾ 33, ಮಂಡ್ಯ 31, ರಾಯಚೂರು 25, ರಾಮನಗರ 23, ದಾವಣಗೆರೆ 21, ಬೀದರ ಹಾಗೂ ಗದಗ ತಲಾ 19, ಬೆಳಗಾವಿ 15, ಚಿಕ್ಕಬಳ್ಳಾಪುರ 12, ತುಮಕೂರು10, ಕೋಲಾರ ಹಾಗೂ ಚಾಮರಾಜನಗರ ತಲಾ 9, ಕೊಪ್ಪಳ 7, ಹಾಸನ, ಶಿವಮೊಗ್ಗ ಹಾಗೂ ಬಾಗಲಕೋಟೆ ತಲಾ 6, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು ತಲಾ 1 ಹೀಗೆ ಒಟ್ಟು 29 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ  ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಾವಿನ ರಣಕೇಕೆ ರಾಜ್ಯದಲ್ಲಿ ಶುಕ್ರವಾರವೂ ಮುಂದುವರೆದಿದ್ದುರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 29 ಜನ ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ 8, ಮೈಸೂರಿನಲ್ಲಿ 4, ಬೀದರ ಹಾಗೂ ಚಿಕ್ಕಮಗಳೂರು 3,  ಗದಗ ಹಾಗೂ ಧಾರವಾಡದಲ್ಲಿ ತಲಾ 2, ಕಲಬರುಗಿ, ಉತ್ತರಕನ್ನಡ, ರಾಯಚೂರು, ಬಳ್ಳಾರಿ, ಹಾವೇರಿಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.  



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *