ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಒಟ್ಟು 3146 ಕೋವಿಡ್ : 18 ವರ್ಷದೊಳಗಿನ 587 ಮಕ್ಕಳು…..!

ಜಿಲ್ಲೆಯ ಕೋವಿಡ್ ಮಾಹಿತಿ

ಧಾರವಾಡ prajakiran.com ಜ..18 : ಧಾರವಾಡ ಜಿಲ್ಲೆಯಲ್ಲಿ ನಿನ್ನೆವರೆಗೆ (ಜ.17) ಕೋವಿಡ್ ಸೋಂಕಿತ ಒಟ್ಟು 3146 ಸಕ್ರೀಯ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 18 ವರ್ಷದೊಳಗಿನ 587 ಮಕ್ಕಳ ಕೋವಿಡ್ ಪ್ರಕರಣಗಳು ಸೇರಿವೆ.

2961 ಸೋಂಕಿತರು (ಹೋಮ್ ಐಸೋಲೆಷನ್‍ನಲ್ಲಿ) ಮನೆಯಲ್ಲಿಯೇ ಪ್ರತ್ಯೇಕವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯ ವಿವಿಧ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ 3,137 ಬೆಡ್‍ಗಳನ್ನು ಮೀಸಲಾಗಿರಿಸಿದ್ದು, ಇಲ್ಲಿಯವರೆಗೆ 142 ಸೋಂಕಿತರು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಆರಂಭಿಸಿರುವ ಮೂರು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ 250 ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ಮತ್ತು ಇಲ್ಲಿಯವರೆಗೆ 46 ಜನ ಕೋವಿಡ್ ಸೋಂಕಿತರು ಕೋವಿಡ್ ಕೇರ್ ಸೆಂಟರ್‍ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *