ಬಳ್ಳಾರಿ Prajakiran.com : ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಸೋಂಕನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿರುವಾಗ ಈಗ ಆರು ವೃದ್ಯರು ರಾಜೀನಾಮೆ ನೀಡಿದ್ದಾರೆ.
ಜಿಲ್ಲಾ ಆರೋಗ್ಯ ಇಲಾಖೆಗೆ ಆರು ವೈದ್ಯರು ಭತ್ತೆ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆ ಕೋರಿ ಏಕಾಏಕಿ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ಪಿಜಿ ಬಳಿಕ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಈಗ ವೈದ್ಯರು ದಿಢೀರನೆ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದು, ತಮ್ಮ ರಾಜೀನಾಮೆ ಪತ್ರಗಳನ್ನು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಎಲ್.ಜನಾರ್ಧನ್ ಅವರಿಗೆ ರವಾನಿಸಿದ್ದಾರೆ.