ಧಾರವಾಡ ಜಿಲ್ಲೆಯಲ್ಲಿ 972 ಸೋಂಕಿತರು, 5 ಜನ ಸಾವು
ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ.
ಸೋಂಕಿತರ ಸಂಖ್ಯೆ ಸೋಮವಾರ ಮತ್ತೆ ಸಾವಿರ ಗಡಿ ಸಮೀಪಿಸಿದೆ.
ಇಂದು ಮತ್ತೆ ಬರೋಬ್ಬರಿ 972 ಜನರಿಗೆ ಕರೋನಾ ಪಾಸಿಟಿವ್ ಬಂದಿದೆ.
ದುರಂತದ ಸಂಗತಿಯೆಂದರೆ ಇಂದು ಕೂಡ 5 ಸೋಂಕಿತರು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.
ಧಾರವಾಡದ ಎಸ್ ಡಿಎಂ ನಲ್ಲಿ 4 ಜನ ಹಾಗೂ ಜಿಲ್ಲಾಸ್ಪತ್ರೆ ಯಲ್ಲಿ ಒಬ್ಬರು ಕೋವಿಡ್ ಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಆತಂಕದ ವಿಚಾರವೆಂದರೆ 540 ಜನ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 6025 ಕ್ಕೆ ಎರಿಕೆ ಆಗಿದೆ.
ಸಮಾಧಾನದ ಸಂಗತಿಯೆಂದರೆ ಸೋಂಕಿತರು 681 ಗುಣಮುಖರಾಗಿ
ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.