ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ ಶೇ.73.19 ಶಾಂತಿಯುತ ಮತದಾನ

ಧಾರವಾಡ ಪ್ರಜಾಕಿರಣ.ಕಾಮ್ ಮೇ.10: ಜಿಲ್ಲೆಯಲ್ಲಿ ಸಂಜೆ 6 ಗಂಟೆ ನಂತರ ಮತದಾನ ಮುಕ್ತಾಯವಾಗಿದ್ದು , ಅಂತಿಮವಾಗಿ ಜಿಲ್ಲೆಯ ಏಳು ವಿಧಾನಸಭಾ ಮತಕ್ಷೇತ್ರಗಳು ಸೇರಿ ಒಟ್ಟು ಶೇಕಡಾವಾರು 73.19 ರಷ್ಟು ಮತದಾನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಎಲ್ಲ 1642 ಮತಗಟ್ಟೆಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ ಮತ್ತು ಕೆಲವು ಮತಗಟ್ಟೆಗಳಲ್ಲಿ 6 ಗಂಟೆ ನಂತರವೂ ಮತದಾನವಾಗಿದ್ದು, ಶಾಂತಿಯುತ ಮತದಾನದ ಮೂಲಕ ಜಿಲ್ಲೆಯ ಮತದಾರರು ಪ್ರಬುದ್ದತೆ ತೋರಿದ್ದಾರೆ.

ಚುನಾವಣೆ ಕಾರ್ಯ ಜಿಲ್ಲೆಯಾದ್ಯಂತ ಶಾಂತಿಯುತವಾಗಿ, ಸುವ್ಯವಸ್ಥಿತವಾಗಿ ಜರುಗಲು ಶ್ರಮವಹಿಸಿದ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಪಂಚಾಯತ ರಾಜ್ ಸೇರಿದಂತೆ ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿಗಳಿಗೆ ಮತ್ತು ಶಾಂತಿಯುತ ಮತದಾನಕ್ಕೆ ಸಹಕಾರ ನೀಡಿದ ಮತದಾರರಿಗೆ ಜಿಲ್ಲಾಧಿಕಾರಿಗಳು ಕೃತಜ್ಞತೆಗಳನ್ನು ತಿಳಿಸಿದ್ದಾರೆ.

*ಮತದಾನ ಮುಕ್ತಾಯ ನಂತರದ ಮತದಾನ ವಿವರ:*

*69 ನವಲಗುಂದ ವಿಧಾನಸಭಾ ಮತಕ್ಷೇತ್ರ ಶೇ. 76.99*

*70 ಕುಂದಗೋಳ ವಿಧಾನಸಭಾ ಮತಕ್ಷೇತ್ರ ಶೇ. 82.82*

*71 ಧಾರವಾಡ ವಿಧಾನಸಭಾ ಮತಕ್ಷೇತ್ರ ಶೇ.76.99*

*72 ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಮತಕ್ಷೇತ್ರ ಶೇ.*70.74*

*73 ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಮತಕ್ಷೇತ್ರ ಶೇ. 64.30*

*74 ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರ ಶೇ. 64.33*

*75 ಕಲಘಟಗಿ ವಿಧಾನಸಭಾ ಮತಕ್ಷೇತ್ರ ಶೇ.81.78*

*ಜಿಲ್ಲೆಯಲ್ಲಿ ಮತದಾನ ಮುಕ್ತಯವಾದಾಗ ಒಟ್ಟು ಆಗಿರುವ ಸರಾಸರಿ ಮತದಾನ ಶೇ. 73.19* ಆಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *