ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಬರೋಬ್ಬರಿ 8 ಸಾವು 157 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಮತ್ತೆ ಹೊಸದಾಗಿ 157 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ.

ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1731 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. 

ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಬರೋಬ್ಬರಿ 8 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ.

ಶುಕ್ರವಾರ 69 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ 593 ಜನ ಬಿಡುಗಡೆಯಾಗಿದ್ದಾರೆ.

ಇನ್ನೂ 1086 ಸಕ್ರಿಯ ಕರೋನಾ ಸೋಂಕಿತರು ಜಿಲ್ಲೆಯಲ್ಲಿದ್ದಾರೆ  ಎಂದು ವಿವರಿಸಿದೆ.

ಇದಲ್ಲದೆ, ಇನ್ನೂ 24  ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಲಾಗಿದೆ.

ಅಲ್ಲದೆ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  52ಕ್ಕೆ ಏರಿದೆ.  

ಸಾವನ್ನಪ್ಪಿದ್ದವರ ವಿವರ :  ಪಿ-15630 ಸೋಂಕಿತ 50 ವರ್ಷದ ವ್ಯಕ್ತಿ, ಪಿ-44962 ಸೋಂಕಿತ 52 ವರ್ಷದ ವ್ಯಕ್ತಿ, ಪಿ-51592 ಸೋಂಕಿತ 55 ವರ್ಷದ ವ್ಯಕ್ತಿ, ಪಿ-52328 ಸೋಂಕಿತ 55 ವರ್ಷದ ಮಹಿಳೆ ನೆಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿದ್ದರು.

ಪಿ-30740 ಸೋಂಕಿತ 46 ವರ್ಷದ ವ್ಯಕ್ತಿ, ಪಿ-31758 62 ವರ್ಷದ ವೃದ್ದ, ಪಿ-38823 ಸೋಂಕಿತ 68 ವರ್ಷದ ವೃದ್ದೆ ಪಿ-44951 ಸೋಂಕಿತ 60 ವರ್ಷದ ವೃದ್ದ,  ಸಾರಿ ಕೇಸ್ (ತೀವ್ರ ಉಸಿರಾಟ) ದ ತೊಂದರೆಯಿಂದ ಬಳಲುತ್ತಿದ್ದರು.

ಇವರೆಲ್ಲರೂ ಚಿಕಿತ್ಸೆ ಫಲಿಸದೆ ನಿಯೋಜಿತ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ತ್ ಬುಲೇಟಿನ್ ವಿವರಿಸಿದೆ. 

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *