ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಮತ್ತೆ ಹೊಸದಾಗಿ 219 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ.
ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 7147ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.
ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರವೂ 8 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ.
ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ 222ಕ್ಕೆ ಏರಿದಂತಾಗಿದೆ.
ಶುಕ್ರವಾರ ಜಿಲ್ಲೆಯಲ್ಲಿ 199 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 4524 ಜನರು ಬಿಡುಗಡೆಗೊಂಡತಾಗಿದೆ. ಇನ್ನೂ ಸಕ್ರಿಯ ಕರೋನಾ ಸೋಂಕಿತರು 2401 ಜಿಲ್ಲೆಯಲ್ಲಿದ್ದಾರೆ ಎಂದು ವಿವರಿಸಿದೆ.
ಇದಲ್ಲದೆ, ಇನ್ನೂ 36 ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಲಾಗಿದೆ. |
ಜಿಲ್ಲೆಯಲ್ಲಿ ಶುಕ್ರವಾರ ಎಂಟು ಜನರು ಚಿಕಿತ್ಸೆ ಫಲಿಸದೆ ಜಿಲ್ಲೆಯ ವಿವಿಧ ನಿಯೋಜಿತ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ತ್ ಬುಲೇಟಿನ್ ವಿವರಿಸಿದೆ.