ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ನಡೆಯುತ್ತಿದ್ದ 8  ಬಾಲ್ಯ ವಿವಾಹಕ್ಕೆ ತಡೆ

ಧಾರವಾಡ ( prajakiran.com) ಮೇ.24: ಧಾರವಾಡ ಜಿಲ್ಲೆಯಲ್ಲಿ ಎಪ್ರೀಲ್ ಹಾಗೂ ಮೇ ತಿಂಗಳಲ್ಲಿ ನಡೆಯುತ್ತಿದ್ದ 8  ಬಾಲ್ಯ ವಿವಾಹಕ್ಕೆ ತಡೆ ಹಾಕಲಾಗಿದೆ.

 ಹುಬ್ಬಳ್ಳಿ ತಾಲೂಕಿನ ಕಿರೇಸೂರ, ಅಮರಗೋಳ, ಉಣಕಲ್, ಚವರಗುಡ್ಟ, ಧಾರವಾಡ ತಾಲೂಕಿನ ಮನಗುಂಡಿ, ದುರ್ಗದಕೇರಿ, ಹೊಸ ತೇಗೂರ, ಕರಡಿಗುಡ್ಡ ಹಾಗೂ ಕಲಘಟಗಿ ತಾಲೂಕಿನ ಮಡಕಿಹೊನ್ನಳ್ಳಿ ಗ್ರಾಮಗಳಲ್ಲಿ ಒಟ್ಟು 8  ಬಾಲಕಿಯರ ಬಾಲ್ಯ ವಿವಾಹವನ್ನು ತಡೆ ಹಿಡಿಯಲಾಯಿತು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾ ಜಾವೂರ, ಸಾಮಾಜಿಕ ಕಾರ್ಯಕರ್ತರಾದ ಶ್ವೇತಾ ಕಿಲ್ಲೇದಾರ, ಕರೇಪ್ಪ ಕೌಜಲಗಿ, ಕ್ಷೇತ್ರ ಕಾರ್ಯಕರ್ತರಾದ ಮಹಮ್ಮದಲಿ ತಹಶಿಲ್ದಾರ, ಆಪ್ತ ಸಮಾಲೋಚಕರಾದ ವಿಶಾಲಾ ಕಾನಪೇಟ, ಶಿಶು ಅಭಿವೃಧಿ ಯೋಜನಾಧಿಕಾರಿಗಳಾದ ವೀಣಾ ಎಮ್, ಅನುಪಮಾ ಅಂಗಡಿ, ಕಮಲಾ ಬೈಲೂರ, ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳ ಸಹಾಯವಾಣಿಯ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ತಂಡದೊಂದಿಗೆ ತಡೆಯಲಾಗಿದೆ.

ಬಾಲಕಿಯರ ಮನೆ ಭೇಟಿ ಮಾಡಿ ಬಾಲಕಿಯ ತಂದೆ-ತಾಯಿ ಹಾಗೂ ನೆರೆದ ಹಿರಿಯರಿಗೆ ಬಾಲ್ಯ ವಿವಾಹ ನಿಷೇಧ ಮತ್ತು ಕರ್ನಾಟಕ ತಿದ್ದುಪಡೆ ಕಾಯ್ದೆ-2016 ರ ಮಾಹಿತಿ ತಿಳಿಸಿ ಜಾಗೃತಿ ಮೂಡಿಸಲಾಯಿತು.

ನಂತರ ಪಾಲಕರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡು ಮಕ್ಕಳ ಕಲ್ಯಾಣ ಸಮಿತಿಗೆ ಹಾಜರಾಗುವಂತೆ ನೋಟೀಸ್ ನೀಡಿ. ಬಾಲಕಿಯರನ್ನು ರಕ್ಷಿಸಿ ಪುನರ್ವಸತಿಗೊಳಿಸಲಾಗಿದೆ ಎಂದು ಧಾರವಾಡ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *