ಅಂತಾರಾಷ್ಟ್ರೀಯ

ರಾಜ್ಯದ ಆರೋಗ್ಯ ಮೂಲಸೌಕರ್ಯ ಅಭಿವೃದ್ದಿಗೆ ಕೇಂದ್ರದಿಂದ 800 ಕೋಟಿ ನೆರವು

ನವದೆಹಲಿ prajakiran.com 
ಜುಲೈ 31 : ಕೋವಿಡ್ 3 ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ 800 ಕೋಟಿ ರೂ. ಮಂಜೂರು ಮಾಡಲು ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಅವರು ಸಮ್ಮತಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

 ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯಕ್ಕೆ 1.5 ಕೋಟಿ ಲಸಿಕೆ ಪೂರೈಸಲು ಕೋರಿಕೆ ಸಲ್ಲಿಸಿದ್ದು, 1 ಕೋಟಿ ಲಸಿಕೆ ಪೂರೈಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದರು.

ಇದರಿಂದ ರಾಜ್ಯದಲ್ಲಿ ಪ್ರತಿದಿನ 2 ರಿಂದ 3 ಲಕ್ಷ ಲಸಿಕೆ ಒದಗಿಸಲು ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಕೋವಿಡ್ 3 ನೇ ಅಲೆ ನಿಯಂತ್ರಣ, ಲಸಿಕೆ ಅಭಿಯಾನ ಹಾಗೂ ನೆರೆರಾಜ್ಯವಾದ ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ನಿಂದಾಗಿ ರಾಜ್ಯದ ಸರಹದ್ದು ಪ್ರವೇಶ ನಿಯಂತ್ರಿಸುವ ಕುರಿತು ಮಾರ್ಗಸೂಚಿ ಸಧ್ಯದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಸಚಿವರು ತಿಳಿಸಿರುವುದಾಗಿ ಮುಖ್ಯಮಂತ್ರಿಗಳು ವಿವರಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *