ಅಪರಾಧ

ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಗಳ ಬಂಧನ

ಲಿಂಗಸುಗೂರು : ಅಕ್ರಮವಾಗಿ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುಜಲೇರದೊಡ್ಡಿಯ ಪರಸಪ್ಪ ಗುಜ್ಜಲ ಹಾಗೂ ಅಮರೇಶ ಗುಜ್ಜಲ ಬಂಧಿತ ಆರೋಪಿಗಳು. ಇವರು ತಮ್ಮ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದರು.

ಈ ಕುರಿತು ಮಾಹಿತಿ ಪಡೆದ ಪೊಲೀಸರು, ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಎಸ್.ಎಸ್. ಹುಲ್ಲೂರು ನೇತೃತ್ವದಲ್ಲಿ ಸಿಪಿಐ ಯಶವಂತ ಬಿಸನಳ್ಳಿ, ಪಿಎಸ್ಐ ಮುದ್ದುರಂಗಸ್ವಾಮಿ ದಾಳಿ ನಡೆಸಿ 16 ಸಾವಿರ ಮೌಲ್ಯದ 9 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *