ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಶನಿವಾರ ಸಂಜೆ ಪ್ರಕಟವಾದ ಹೆಲ್ತ್ ಬುಲೇಟಿನ್ ನಲ್ಲಿ ಮತ್ತೇರಡು ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.
ಸೋಂಕಿತರನ್ನು ಪಿ-2807 ನೇ 26 ವರ್ಷದ ಮಹಿಳೆ ಹಾಗೂ ಪಿ-2808 27 ವರ್ಷದ ಮಹಿಳೆ ಎಂದು ಗುರುತಿಸಲಾಗಿದೆ.
ಇವರ ಪೈಕಿ ಪಿ-2807 ನೇ 26 ವರ್ಷದ ಮಹಿಳೆ ಪಿ-1123ರ ಸೋಂಕಿತರ ಸಂಪರ್ಕದಿಂದ ಬಂದಿದ್ದರೆ, ಪಿ-2808 27 ವರ್ಷದ ಸೋಂಕಿತೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಪ್ರಯಾಣ ಮಾಡಿದ ಹಿನ್ನೆಲೆ ಹೊಂದಿದ್ದಾರೆ ಎಂದು ವಿವರಿಸಿದ್ದಾರೆ.
ಆ ಮೂಲಕ ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 46 ಕ್ಕೆ ಏರಿಕೆಯಾಗಿದೆ.
ಈ ಪೈಕಿ ಈಗಾಗಲೇ 11 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ . ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸದ್ಯ ಧಾರವಾಡ ಜಿಲ್ಲೆಯಲ್ಲಿ ಕರೋನಾ ವೈರಸ್ ನಿಯಂತ್ರಣದಲ್ಲಿದ್ದು, ಹೊರ ರಾಜ್ಯದಿಂದ ಬಂದವರಿಂದಲೇ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.
ಅವರನ್ನು ಬಂದ ತಕ್ಷಣ ತಪಾಸಣೆಗೆ ಒಳಪಡಿಸಿ ಅಗತ್ಯ ಕ್ವಾರಂಟಿನ್ ಮಾಡಲಾಗುತ್ತಿದೆ.
ಈ ಬಗ್ಗೆ ಜಿಲ್ಲೆಯ ಜನತೆ ಯಾವುದೇ ಆತಂಕ ಪಡುವಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಅಭಯ ನೀಡಿದ್ದಾರೆ.