200ರ ಗಡಿ ದಾಟಿದ ಸಾವಿನ ಸಂಖ್ಯೆ |
ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮತ್ತೆ ಹೊಸದಾಗಿ 276 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ.
ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 6402ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.
ಧಾರವಾಡ ಜಿಲ್ಲೆಯಲ್ಲಿ ಮಂಗಳವಾರವೂ 9 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ.
ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ 206ಕ್ಕೆ ಏರಿದಂತಾಗಿದೆ.
ಮಂಗಳವಾರ ಜಿಲ್ಲೆಯಲ್ಲಿ 436 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ ಜನರು 3952 ಬಿಡುಗಡೆಗೊಂಡತಾಗಿದೆ.
ಇನ್ನೂ 2244 ಸಕ್ರಿಯ ಕರೋನಾ ಸೋಂಕಿತರು ಜಿಲ್ಲೆಯಲ್ಲಿದ್ದಾರೆ ಎಂದು ವಿವರಿಸಿದೆ.ಇದಲ್ಲದೆ, ಇನ್ನೂ38 ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಲಾಗಿದೆ.
ಜಿಲ್ಲೆಯಲ್ಲಿ ಮಂಗಳವಾರ ಒಂಬತ್ತು ಜನರು ಚಿಕಿತ್ಸೆ ಫಲಿಸದೆ ಜಿಲ್ಲೆಯ ವಿವಿಧ ನಿಯೋಜಿತ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ತ್ ಬುಲೇಟಿನ್ ವಿವರಿಸಿದೆ.