ಜಿಲ್ಲೆ

ಧಾರವಾಡ ಜಿಲ್ಲೆಯಾದ್ಯಂತ ಆ. 22 ರಿಂದ ಮದ್ಯಮಾರಾಟ ನಿಷೇಧ

ಧಾರವಾಡ prajakiran.com : ಆಗಸ್ಟ್ 22‌ ರಿಂದ ಸೆ.4 ರವರೆಗೆ ಗಣೇಶ ಹಬ್ಬದ ಆಚರಣೆ ಪ್ರಯುಕ್ತ ಜಿಲ್ಲೆಯ ನಗರ  ಮತ್ತು ಗ್ರಾಮಗಳಲ್ಲಿ ಬೇರೆ ಬೇರೆ ದಿವಸಗಳಂದು ಗಣೇಶ ವಿಗ್ರಹಗಳ ವಿಸರ್ಜನಾ ನಡೆಯುವ  ಹಿನ್ನಲೆ ಮುಂಜಾಗೃತಾ ಕ್ರಮವಾಗಿ ಮದ್ಯಪಾನ ,ಮದ್ಯಮಾರಾಟ ಹಾಗೂ ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ.

ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21(1 ) ಕಾಯ್ದೆಯಡಿ   ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ.

ಸಮಾರಂಭ, ಸಂಗೀತ, ನೃತ್ಯ, ಮುಂತಾದ ಮನರಂಜನಾ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ.

ಗಣೇಶ ಮೂರ್ತಿಯನ್ನು ತಮ್ಮ ಮನೆಯ ಆವರಣದಲ್ಲಿ, ನೀರಿನ‌‌ ಬ್ಯಾರಲ್, ಬಕೆಟ್ ಗಳಲ್ಲಿ ವಿಸರ್ಜನೆ ಮಾಡಬೇಕು.

ಯಾವುದೇ ರೀತಿಯಾಗಿ ಜನ ಸಂದಣಿ ಉಂಟು ಮಾಡಬಾರದು, ಭಕ್ತಾದಿಗಳಿಗೆ ಸ್ಯಾನಿಟೈಸರ್,ಮಾಸ್ಕ್ ಧರಿಸಲು ಸೂಚಿಸಬೇಕು.

ಸಾಮಾಜಿಕ ಅಂತರ ಕಾಯ್ದು ಕೊಳ್ಳಬೇಕು,ಪರಿಸರ ಸ್ನೇಹಿ ಗಣೇಶ ‌ಮೂರ್ತಿಯನ್ನು ಪ್ರತಿಷ್ಟಾಪಿಸಲು  ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *