ಬೆಂಗಳೂರು prajakiran.com : ರಾಜ್ಯದಲ್ಲಿ ಜಾರಿ ತಂದಿರುವ #ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿ, ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ತಮ್ಮ ಮುಖಪುಸ್ತಕದಲ್ಲಿ ಬರೆದುಕೊಂಡಿರುವಅವರು, #ವಿದ್ಯಾಗಮ ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ ಎಂದು ವಿವರಿಸಿದ್ದಾರೆ.
ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ ಹಾಗೂ ಅದರ ಸಮರ್ಪಕ ವಿಶ್ಲೇಷಣೆ ಪೂರ್ಣಗೊಳ್ಳುವವರೆಗೂ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅದಕ್ಕೆ ಸದ್ಯಕ್ಕೆ ಬ್ರೇಕ್ ಹಾಕಿದ್ದಾರೆ.
ಈ ಕುರಿತು ವ್ಯಾಪರ ಪರ ವಿರೋಧ ವ್ಯಾಪಕ ಟೀಕೆಗಳು, ಸ್ವಾಗತ ವ್ಯಕ್ತವಾಗಿದ್ದು, ಬಡ ಮಕ್ಕಳ ಶಿಕ್ಷಣಕ್ಕೆ ಕರೋನಾ ಹೆಸರಿನಲ್ಲಿ ಲಗಾಮು ಹಾಕಿರುವುದಕ್ಕೆ ಅನೇಕರು ಅಸಮಾಧಾನ ಹೊರ ಹಾಕಿರುವುದು ಮಾತ್ರ ಗುಟ್ಟಾಗಿ ಉಳಿದಿಲ್ಲ.