ಧಾರವಾಡ prajakiran.com : ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ನನ್ನನ್ನೂ ಉದ್ದೇಶಪೂರ್ವಕವಾಗಿ ಬಂಧಿಸಲಾಗಿದೆ. ಇದು ನೂರಕ್ಕೆ ನೂರು ರಾಜಕೀಯ ಪ್ರೇರಿತ ಎಂದು ಮಾಜಿ ಸಚಿವ ವಿನಯ ಕುಲಕರ್ಣಿ ಆರೋಪಿಸಿದ್ದಾರೆ.
ಗುರುವಾರ ಸಂಜೆ ಧಾರವಾಡ ಜಿಲ್ಲಾಸ್ಪತ್ರೆಗೆ ಸಿಬಿಐ ಅಧಿಕಾರಿಗಳು ಆರೋಗ್ಯ ತಪಾಸಣೆಗೆ ಕರೆದುಕೊಂಡು ಬಂದಾಗಅವರು ಸುದ್ದಿಗಾರರೊಂದಿಗೆ ಮಾತನಾಡಿ, ಇದರಲ್ಲಿ ಏನೂ ಹೇಳುವುದಿದೆ ಹೇಳಿ ಎಂದು ಪ್ರತಿಕ್ರಿಯೆ ನೀಡಿದರು.
ಇದೇ ವೇಳೆ ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ, ಅವರ ಮಾವ ಚಂದ್ರಶೇಖರ ಇಂಡಿ ಅಲಿಯಾಸ್ ಚಂದು ಮಾಮ, ಮಾಜಿ ಸಚಿವರ ಆಪ್ತ ಕಾರ್ಯದರ್ಶಿ ಸೋಮು ನ್ಯಾಮಗೌಡರ ಸೇರಿದಂತೆ ಹಲವರನ್ನು ಸಿಬಿಐ ಅಧಿಕಾರಿಗಳು ಬೆಳಗ್ಗೆಯಿಂದ ಪ್ರತ್ಯೇಕ ಹಾಗೂ ಒಟ್ಟಿಗೆ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಅಲ್ಲದೆ, ನಾಳೆ ಮಾಜಿ ಸಚಿವ ವಿನಯ ಕುಲಕರ್ಣಿಯವರಿಗೆ ನ್ಯಾಯಾಲಯ ಮೂರುದಿನಗಳ ಸಿಬಿಐ ವಶಕ್ಕೆ ನೀಡುತ್ತಾ ಅಥವಾ ಇಲ್ಲವೇ ಎಂಬುದು ತಿಳಿಯಲಿದೆ.
ನಾಳೆಯೂ ಸಿಬಿಐ ಅಧಿಕಾರಿಗಳ ವಿಚಾರಣೆ ಮುಂದುವರೆಯುವ ಸಾಧ್ಯತೆಯಿದ್ದು, ಮತ್ತೇ ಯಾರನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ ಎಂಬುದು ಕಾದು ನೋಡಬೇಕಿದೆ.