ಹೈದ್ರಾಬಾದ್ prajakiran. com : ಬಹುಬೇಡಿಕೆಯ ಟಾಲಿವುಡ್ ನಟ, ಸ್ಟೈಲಿಶ್ ಸ್ಟಾರ್ ಎಂದೇ ಖ್ಯಾತರಾದ ಅಲ್ಲು ಅರ್ಜುನ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ್ಗ ಕುರಿತು ಇನ್ಸ್ಟಾಗ್ರಾಮ್ ನಲ್ಲಿ
ಮಾಹಿತಿ ಹಂಚಿಕೊಂಡಿರುವ ಅವರು, ನನಗೆ ಕೊರೋನಾ ಸೋಂಕು ತಗುಲಿದ್ದು, ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ.
ನನ್ನ ಸಂಪರ್ಕಕ್ಕೆ ಬಂದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.
ಅಲ್ಲದೇ ಎಲ್ಲರೂ ಸುರಕ್ಷಿತವಾಗಿ ಮನೆಯಲ್ಲೇ ಇರಿ, ಸಮಯ ಮಾಡಿಕೊಂಡು ಕೊರೋನಾ ಲಸಿಕೆ ಪಡೆಯಿರಿ.
ನನ್ನ ಬಗ್ಗೆ ಯಾರೂ ಚಿಂತಿಸಬೇಡಿ ನಾನು ಆರೋಗ್ಯವಾಗಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.