ಬೆಂಗಳೂರು prajakiran.com : ಕೊರೋನಾ ವರದಿ ನಂತರ ವೈದ್ಯರ ಸಲಹೆ ಮೇರೆಗೆ ಬಹುತೇಕ ರೋಗಿಗಳಿಗೆ ಸಿಟಿ ಸ್ಕ್ಯಾನ್ ಮಾಡಿಸಲಾಗುತ್ತದೆ.
ಆದರೆ ಖಾಸಗಿ ಲ್ಯಾಬ್ಗಳಲ್ಲಿ ಸಿಟಿ ಸ್ಕ್ಯಾನ್ ನಡೆಸಲು 7000 ರಿಂದ 10000 ರೂಪಾಯಿಗಳವರೆಗೆ ಶುಲ್ಕ ವಿಧಿಸಲಾಗುತ್ತಿತ್ತು.
ಈ ಸಂಬಂಧ ಸಾಕಷ್ಟು ದೂರುಗಳನ್ನ ಸ್ವೀಕರಿಸಿದ ರಾಜ್ಯ ಸರ್ಕಾರ ಇದೀಗ ಇಂತಹ ಲ್ಯಾಬ್ಗಳ ವಿರುದ್ಧ ಕ್ರಮಕ್ಕೆ ಮುಂದಾಗಿದೆ.
ಪ್ರತಿ ಸಿಟಿ ಸ್ಕ್ಯಾನ್ 1500 ರೂಪಾಯಿಯನ್ನು ಮಾತ್ರ ಪಡೆಯಬೇಕು ಎಂದು ಆದೇಶ ಪ್ರಕಟಿಸಿದೆ.
ಸರ್ಕಾರದ ಆದೇಶದ ಹೊರತಾಗಿಯೂ ಹೆಚ್ಚಿನ ದರ ತೆಗೆದುಕೊಳ್ಳುತ್ತಿರೋದು ಕಂಡುಬಂದಲ್ಲಿ ಅಂತಹ ಆಸ್ಪತ್ರೆ ಲ್ಯಾಬ್ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಎಚ್ಚರಿಕೆ ನೀಡಿದೆ.
ಸರಕಾರಿ ವ್ಯವಸ್ಥೆ ಅಡಿ ಸ್ಕ್ಯಾನಿಂಗ್ ಅನ್ನು ಉಚಿತವಾಗಿ ಮಾಡಲಾಗುತ್ತಿದೆ. ಸಾರ್ವಜನಿಕರು ಸರಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದೂ ಸಚಿವ ಸುಧಾಕರ್ ಮನವಿ ಮಾಡಿದ್ದಾರೆ.